ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ನಲ್ಲಿ ಇಂದಿರಾ ಸಾಹ್ನಿ ಪ್ರಕರಣದ ಮರು ಪರಿಶೀಲನಾ ಅರ್ಜಿ ವಿಚಾರಣೆ ಆರಂಭ

Last Updated 15 ಮಾರ್ಚ್ 2021, 8:16 IST
ಅಕ್ಷರ ಗಾತ್ರ

ನವದೆಹಲಿ: ಮೀಸಲಾತಿಯ ಮಿತಿಯನ್ನು ಶೇ 50ಕ್ಕೆ ನಿಗದಿಪಡಿಸಿರುವ 1992ರ ಇಂದಿರಾ ಸಾಹ್ನಿ ಪ್ರಕರಣದ ಐತಿಹಾಸಿಕ ತೀರ್ಪನ್ನು ವಿಸ್ತೃತ ಪೀಠದಿಂದಮರುಪರಿಶೀಲಿಸುವ ಅಗತ್ಯವಿದೆಯೇ ಎಂಬ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಆರಂಭಿಸಿತು.

ನ್ಯಾಯಮೂರ್ತಿ ಅಶೋಕ್ ಭೂಷಣ್‌ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ, ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಕ್ಷಿಪ್ತ ವರದಿಯನ್ನು ಸಲ್ಲಿಸಲು ಎಲ್ಲ ರಾಜ್ಯಗಳಿಗೆ ಒಂದು ವಾರ ಕಾಲಾವಕಾಶ ನೀಡಿತು.

ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರರಾವ್, ಎಸ್. ಅಬ್ದುಲ್ ನಝೀರ್, ಹೇಮಂತ್ ಗುಪ್ತಾ ಮತ್ತು ಎಸ್‌ ರವೀಂದ್ರ ಭಟ್‌ ಇದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರವಿಂದ್ ದಾತರ್‌, ಹಿಂದಿನ ನ್ಯಾಯಪೀಠದ ಕೆಲವು ವಾದಗಳನ್ನು ಉಲ್ಲೇಖಿಸುತ್ತಾ, ‘ಇಂದಿರಾ ಸಾಹ್ನಿ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿಲ್ಲ‘ ಎಂದು ಹೇಳಿದರು.

‘ಶೇ 50ರಷ್ಟು ಮೀಸಲಾತಿ ನಿಗದಿ ಸೇರಿದಂತೆ ಹಲವು ವಿಚಾರಗಳನ್ನು ಒಳಗೊಂಡಿರುವ ಇಂದಿರಾ ಸಾಹ್ನಿ ಪ್ರಕರಣವನ್ನು ಮರು ಪರಿಶೀಲಿಸಲು ಹನ್ನೊಂದು ನ್ಯಾಯಮೂರ್ತಿಗಳನ್ನು ಒಳಗೊಂಡ ಬೃಹತ್‌ ಪೀಠವನ್ನು ರಚಿಸಬೇಕಾಗುತ್ತದೆ. ಆದರೆ ಇದರ ಅಗತ್ಯ ಇಲ್ಲ’ ಎಂದರು.

ಸುಪ್ರೀಂ ಕೋರ್ಟ್ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ವಿಶಿಷ್ಟ ಮತ್ತು ಸಾಂವಿಧಾನಿಕ ಪ್ರಾಮುಖ್ಯ ಪಡೆದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕೇವಲ ಐದು ಬಾರಿ, 11 ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವನ್ನು ರಚಿಸಲಾಗಿದೆ.

‘ಇಂದಿರಾ ಸಾಹ್ನಿ ಪ್ರಕರಣದಲ್ಲಿ ಉದ್ಭವಿಸಿರುವ ಪ್ರಶ್ನೆ ಎಂದರೆ, ಶೇ 50ರಷ್ಟು ಮೀಸಲಾತಿಯ ಮಿತಿಯನ್ನು ತೆಗೆದು ಹಾಕಬಹುದೇ ಎಂಬುದು. ಆದರೆ, ಈ ಪ್ರಕರಣದ ಬಗ್ಗೆ ಹಲವಾರು ದೃಷ್ಟಿಕೋನ ಗಳಿಂದ, ಸಾಕಷ್ಟು ಚರ್ಚೆಗಳು ನಡೆದಿವೆ. ನನ್ನ ಪ್ರಕಾರ ಈ ಪ್ರಕರಣವನ್ನು ಮರುಪರಿಶೀಲಿಸುವ ಅಗತ್ಯವಿಲ್ಲ‘ ಎಂದು ದಾತರ್ ಹೇಳಿದರು. ‘ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಶೇಕಡಾ 50 ರಷ್ಟು ಮೀಸಲಾತಿಯ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT