ನವದೆಹಲಿ: ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್‌ನ ಪೀಠ ಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ, ಕೈಗೊಂಡ ಕ್ರಮಗಳ ಕುರಿತ ವರದಿ ಹಾಗೂ ಈ ಸಂಬಂಧ ಬಾರ್ ಕೌನ್ಸಿಲ್‌ನ ಕೆಲ ಸದಸ್ಯರು ನಡೆಸಿದ್ದ ಸಭೆಯ ವಿವರಗಳನ್ನು ಬಹಿರಂಗಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಮಹಾರಾಷ್ಟ್ರದ ಉಲ್ಲಾಸ್‌ನಗರದ ವಕೀಲ ಅಮೃತಪಾಲ್ ಸಿಂಗ್ ಖಾಲ್ಸಾ ಎಂಬುವವರು ಈ ವಿವರಗಳನ್ನು ಕೋರಿ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.

‘ಮೂರನೇ ಪಕ್ಷಗಾರರರೊಂದಿಗಿನ ನಂಬಿಕೆಗೆ ಸಂಬಂಧಿಸಿದ ವಿಷಯ ಇದಾಗಿದೆ. ಈ ಮಾಹಿತಿಯನ್ನು ನೀಡುವುದಕ್ಕೆಪಾರದರ್ಶಕತೆ ಕಾಯ್ದೆಯಡಿ ವಿನಾಯಿತಿಯನ್ನೂ ನೀಡಲಾಗಿದೆ’ ಎಂದು ಆರ್‌ಟಿಐ ಅರ್ಜಿಗೆ ನೀಡಿರುವ ಉತ್ತರದಲ್ಲಿ ಸುಪ್ರೀಂಕೋರ್ಟ್ ತಿಳಿಸಿದೆ.

ಬಾರ್ ಕೌನ್ಸಿಲ್‌ನ ಸದಸ್ಯರ ನಿಯೋಗವೊಂದು ಜುಲೈ 26ರಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳನ್ನು ಭೇಟಿ ಮಾಡಿ, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್‌ನ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತ್ತು.

ಕೌನ್ಸಿಲ್‌ನ ಸದಸ್ಯರಾಗಿರುವ ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ವಕೀಲರು ಈ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.