ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಸುಪ್ರೀಂ ಕೋರ್ಟ್

ಮತಾಂತರ ವಿರೋಧಿ ಕಾನೂನಿನ ಕುರಿತು ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಣೆ
Last Updated 3 ಜನವರಿ 2023, 14:21 IST
ಅಕ್ಷರ ಗಾತ್ರ

ನವದೆಹಲಿ: ‘ಇತರ ಧರ್ಮಕ್ಕೆ ಮತಾಂತರಗೊಳ್ಳುವ ಮೊದಲು ಜಿಲ್ಲಾಧಿಕಾರಿಗೆ 60 ದಿನಗಳ ಮುಂಚಿತವಾಗಿ ನೋಟಿಸ್ ನೀಡದಿರುವ ವ್ಯಕ್ತಿಯ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ಬಂಧ ವಿಧಿಸಿರುವ ಮಧ್ಯಪ್ರದೇಶ ಹೈಕೋರ್ಟಿನ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ನೇತೃತ್ವದ ನ್ಯಾಯಪೀಠವು, ‘ಎಲ್ಲಾ ಮತಾಂತರಗಳನ್ನು ಕಾನೂನುಬಾಹಿರ ಎಂದು ಕರೆಯಲಾಗುವುದಿಲ್ಲ’ ಎಂದೂ ಹೇಳಿದೆ.

ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಮದುವೆಯ ಪ್ರಕ್ರಿಯೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ವಿಚಾರದಲ್ಲಿ ನಾವು ಕಣ್ಣುಮುಚ್ಚಿ ಕುಳಿತುಕೊಳ್ಳಲಾಗದು. ಮದುವೆ ಅಥವಾ ಮತಾಂತರಕ್ಕೆ ಯಾವುದೇ ನಿಷೇಧವಿಲ್ಲ. ಆದರೆ, ಈ ಕುರಿತು ಜಿಲ್ಲಾಧಿಕಾರಿಗೆ ತಿಳಿಸುವ ಅಗತ್ಯವಿದೆ’ ಎಂದು ಪ್ರತಿಪಾದಿಸಿ, ಹೈಕೋರ್ಟ್ ಆದೇಶಕ್ಕೆ ತಡೆ ಕೋರಿದರು. ಆದರೆ, ತಡೆ ನೀಡಲು ನ್ಯಾಯಪೀಠವು ನಿರಾಕರಿಸಿತು.

ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿದಾರರಾದ ಸ್ಯಾಮ್ಯುಯೆಲ್ ಡೇನಿಯಲ್ ಎಂಬುವವರಿಗೆ ನೋಟಿಸ್ ಜಾರಿ ಮಾಡಿದ ನ್ಯಾಯಪೀಠವು, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ. 7ಕ್ಕೆ ಮುಂದೂಡಿತು.

‘ವಯಸ್ಕ ನಾಗರಿಕರು ತಮ್ಮ ಸ್ವಇಚ್ಛೆಯ ಮೇರೆಗೆ ವಿವಾಹವಾದರೆ, ಅವರ ವಿರುದ್ಧ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ (ಎಂಪಿಎಫ್‌ಆರ್‌ಎ) 2021ರ ಸೆಕ್ಷನ್ 10ರ ಅಡಿಯಲ್ಲಿ ಕಾನೂನುಕ್ರಮ ಜರುಗಿಸಬಾರದು’ ಎಂದು ಮಧ್ಯಪ್ರದೇಶ ಹೈಕೋರ್ಟ್ 2022ರ ನವೆಂಬರ್‌ನಲ್ಲಿ ತೀರ್ಪು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT