ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್ಎಸ್‌ ಮೆರವಣಿಗೆ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿಕೆ

Last Updated 17 ಮಾರ್ಚ್ 2023, 14:24 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಎಸ್‌ಎಸ್‌ಗೆ ಮೆರವಣಿಗೆ ನಡೆಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.

ಕಳೆದ ವರ್ಷ ಸೆ. 22 ರಂದು ಆರ್‌ಎಸ್ಎಸ್‌ ಪ್ರಾತಿನಿಧ್ಯವನ್ನು ಪರಿಗಣಿಸಿ ಷರತ್ತುಗಳಿಲ್ಲದೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶಿಸಿದ ಮೂಲ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದರು.

ಬಳಿಕ ನ್ಯಾಯಮೂರ್ತಿಗಳಾದ ವಿ. ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿತ್ತಲ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 27 ಕ್ಕೆ ಮುಂದೂಡಿದರು.

ಆರ್‌ಎಸ್‌ಎಸ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣದ ಕೊನೆಯ ವಿಚಾರಣೆಯಲ್ಲಿ ಮೆರವಣಿಗೆಗೆ ಅವಕಾಶ ನೀಡುವ ಕುರಿತು ಪರ್ಯಾಯ ಪ್ರಸ್ತಾವನೆಗಳನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿತು ಎಂದರು.

‘ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ಅವರು ಮೊದಲು ಮೇಲ್ಮನವಿ ಸಲ್ಲಿಸಿ, ನಂತರ ಪರ್ಯಾಯ ಪ್ರಸ್ತಾಪಗಳನ್ನು ನೀಡುತ್ತಾರೆ’ ಎಂದು ರೋಹಟಗಿ ಮಾಹಿತಿ ನೀಡಿದರು.

ಮೇಲ್ಮನವಿ ಸಲ್ಲಿಸಲು ರಾಜ್ಯಕ್ಕೆ ಯಾವುದೇ ಹಕ್ಕಿಲ್ಲ ಎಂದು ಆರ್‌ಎಸ್‌ಎಸ್ ವಕೀಲರು ಹೇಳುತ್ತಿಲ್ಲ. ಆದರೆ, ಪ್ರಸ್ತಾವನೆಗಳನ್ನು ಸಹ ನೀಡಿದರೆ ಉತ್ತಮವಾಗಿರುತ್ತಿತ್ತು ಎಂದು ಪೀಠ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT