ಕೋವಿಡ್ ಚಿಕಿತ್ಸೆಗೆ ಆಯುರ್ವೇದ ಔಷಧಿ ಪ್ರಯೋಗ: ಅರ್ಜಿ ತಿರಸ್ಕರಿಸಿದ ‘ಸುಪ್ರೀಂ’

ನವದೆಹಲಿ: ಕೋವಿಡ್–19 ಸಾಂಕ್ರಾಮಿಕ ರೋಗ ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿದ ಆಯುರ್ವೇದ ಮೂಲದ ಔಷಧಿಯನ್ನು ಪ್ರಯೋಗಿಸಲು ಕೇಂದ್ರ ಸರ್ಕಾರ ಮತ್ತು ಆಯುಷ್ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವೈದ್ಯರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠವು, ‘ಅರ್ಜಿದಾರರು ಕೋರಿರುವ ಸಂಗತಿಯು ಸಾರ್ವಜನಿಕ ಆರೋಗ್ಯ ಕ್ಷೇತ್ರದ ನೀತಿಗೆ ಸಂಬಂಧಪಟ್ಟಿದೆ’ ಎಂದು ಹೇಳಿದೆ.
‘ಕೋವಿಡ್–19 ಚಿಕಿತ್ಸೆಗೆ ಅಭಿವೃದ್ಧಿಪಡಿಲಾಗಿದೆ ಎನ್ನಲಾದ ಆಯುರ್ವೇದ ಮೂಲದ ಔಷಧಿಯ ಪರಿಣಾಮಕಾರಿ ಗುಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಹಕ್ಕನ್ನು ನಿರ್ಣಯಿಸುವ ಸ್ಥಾನದಲ್ಲಿ ನ್ಯಾಯಾಲಯವು ಇಲ್ಲ. ಹಾಗಾಗಿ, ನಾವು ಒಟ್ಟಾರೆ ಅರ್ಜಿಯನ್ನು ತಿರಸ್ಕರಿಸುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಆರ್.ಎಸ್. ರೆಡ್ಡಿ ಮತ್ತು ಎಸ್.ಆರ್. ಭಟ್ ಅವರನ್ನೊಳಗೊಂಡ ನ್ಯಾಯಪೀಠವು ಜೂನ್ 28ರಂದು ನೀಡಿದ ಆದೇಶದಲ್ಲಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.