ನವದೆಹಲಿ: ಯಾವುದೇ ಜೀವಂತ ವ್ಯಕ್ತಿಯಂತೆ ಹಕ್ಕುಗಳನ್ನು ಹೊಂದಿರುವ ಎಲ್ಲಾ ಪ್ರಾಣಿಗಳನ್ನು ಕಾನೂನು ಘಟಕಗಳೆಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲ ಅವರನ್ನೊಳಗೊಂಡ ಪೀಠವು ಪಿಐಎಲ್ ವಜಾಗೊಳಿಸಿತು.
‘ಅರ್ಜಿಯಲ್ಲಿ ಮಾಡಿರುವ ಮನವಿಯನ್ನು ಸಂವಿಧಾನದ 32 ನೇ ವಿಧಿ ಅಡಿಯಲ್ಲಿ ಮಂಜೂರು ಮಾಡಲು ಸಾಧ್ಯವಿಲ್ಲ. ಹಾಗಾಗಿ ಅರ್ಜಿ ವಜಾ ಮಾಡಲಾಗಿದೆ‘ ಎಂದು ಹೇಳಿದೆ.
‘ಪ್ರಾಣಿಗಳ ಮೇಲಿನ ಕ್ರೌರ್ಯದ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಇದು ಮಾನವರಿಗೆ ಪ್ರಾಣಿಗಳ ಜೀವನದ ಬಗ್ಗೆ ಹೇಗೆ ಗೌರವವಿಲ್ಲ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ’ ಎಂದು ಎನ್‌ಜಿಒ ಪೀಪಲ್ಸ್ ಸಾರಥಿ ಆರ್ಗನೈಸೇಷನ್ ಸಲ್ಲಿಸಿದ ಪಿಐಎಲ್‌ನಲ್ಲಿ ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.