ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019ರಲ್ಲಿ ಕೇರಳದ ವಯನಾಡ್‌ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ವಯನಾಡ್ ಮತ್ತು ಎರ್ನಾಕುಳಂ ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯನ್ನು ಪ್ರಶ್ನಿಸಿ ಸರಿತಾ ಎಸ್. ನಾಯರ್ ಸಲ್ಲಿಸಿದ್ದ ಅರ್ಜಿಯನ್ನು 2019ರಲ್ಲಿ ಕೇರಳ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ 2020 ನವೆಂಬರ್ 2ರಂದು ವಜಾಗೊಳಿಸಿತ್ತು. ಅರ್ಜಿಯನ್ನು ಮರುಪರಿಶೀಲಿಸಬೇಕೆಂದು ಕೋರಿ ಸರಿತಾ ಅವರು ಮತ್ತೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ದೀಪಾಂಕರ್ ದತ್ತಾ ಅವರಿದ್ದ ನ್ಯಾಯಾಪೀಠವು ಶುಕ್ರವಾರ ವಜಾಗೊಳಿಸಿದೆ.

‘ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಆದ್ದರಿಂದ ಅರ್ಜಿಯನ್ನು ತಳ್ಳಿಹಾಕುತ್ತೇವೆ’ ಎಂದೂ ಹೇಳಿದೆ.

ಸರಿತಾ ಅವರು ವಯನಾಡ್ ಮತ್ತು ಎರ್ನಾಕುಳಂ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು, ಸೌರಫಲಕ ಹಗರಣಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಅಪರಾಧಿಯಾಗಿದ್ದ ಕಾರಣಕ್ಕೆ ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.