ಶುಕ್ರವಾರ, ಡಿಸೆಂಬರ್ 4, 2020
24 °C

ಸಿಬಿಎಸ್‌ಇ ಪರೀಕ್ಷಾ ಶುಲ್ಕ ಮನ್ನಾ ಕೋರಿದ್ದ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ‘ಸೋಷಿಯಲ್‌ ಜ್ಯೂರಿಸ್ಟ್’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ಕೋವಿಡ್‌ನಿಂದಾಗಿ ಕೆಲ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪರೀಕ್ಷಾ ಶುಲ್ಕ ಕಟ್ಟುವುದು ಕಷ್ಟ. ಹೀಗಾಗಿ ಶುಲ್ಕದಿಂದ ವಿನಾಯಿತಿ ನೀಡಬೇಕೆಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹಾಗೂ ದೆಹಲಿ ಸರ್ಕಾರಕ್ಕೆ ಸೂಚಿಸಬೇಕೆಂದು ‘ಸೋಷಿಯಲ್‌ ಜ್ಯೂರಿಸ್ಟ್’ ಸಂಸ್ಥೆ ಮನವಿ ಮಾಡಿತ್ತು.

ನ್ಯಾಯಮೂರ್ತಿಗಳಾದ ಅಶೋಕ್‌ ಭೂಷಣ್‌, ಆರ್‌.ಸುಭಾಶ್‌ ರೆಡ್ಡಿ ಮತ್ತು ಎಂ.ಆರ್‌.ಶಾ ಅವರಿದ್ದ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿತು.

‘ಶುಲ್ಕದಿಂದ ವಿನಾಯಿತಿ ನೀಡಿ ಎಂದು ನ್ಯಾಯಾಲಯವು ಆಡಳಿತಾರೂಢ ಸರ್ಕಾರಕ್ಕೆ ನಿರ್ದೇಶನ ನೀಡುವುದಾದರೂ ಹೇಗೆ’ ಎಂದು ಪೀಠವು ಕೇಳಿತು.  

ಸೆಪ್ಟೆಂಬರ್‌ 28ರಂದು ಇದರ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್‌, ಈ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸಬೇಕು. ಶುಲ್ಕದಿಂದ ವಿನಾಯಿತಿ ನೀಡಲು ಸರ್ಕಾರದ ನೀತಿಯಲ್ಲಿ ಅವಕಾಶವಿದೆಯೇ ಎಂಬುದನ್ನೂ ಗಮನಿಸಬೇಕು. ಈ ಸಂಬಂಧ ಮೂರು ವಾರಗಳೊಳಗೆ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ದೆಹಲಿ ಸರ್ಕಾರ ಹಾಗೂ ಸಿಬಿಎಸ್‌ಇಗೆ ಸೂಚಿಸಿತ್ತು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು