ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಪರೀಕ್ಷೆ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Last Updated 4 ಅಕ್ಟೋಬರ್ 2021, 11:12 IST
ಅಕ್ಷರ ಗಾತ್ರ

ನವದೆಹಲಿ: ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆದಿಲ್ಲ ಎಂಬ ಕಾರಣ ನೀಡಿ, ಸೆಪ್ಟೆಂಬರ್‌ 12ರಂದು ನಡೆದಿದ್ದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್‌–ಯುಜಿ) ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

‘ಲಕ್ಷಾಂತರ ವಿದ್ಯಾರ್ಥಿಗಳು ಬರೆದಿರುವ ಈ ಪರೀಕ್ಷೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ‘ ಎಂದು ನ್ಯಾಯಾಲಯ ಹೇಳಿತು.

ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. 20 ವರ್ಷದ ಸಲೊನಿ ಎಂಬುವವರು ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ, ಅದನ್ನು ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ನಡೆಸುವಂತೆ ಕೋರಿ ಈ ಅರ್ಜಿ ಸಲ್ಲಿಸಿದ್ದರು.

ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಮೇಲೆ ಸಿಬಿಐ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದೆ. ಆ ಎಫ್‌ಐಆರ್‌ಗಳಲ್ಲಿ ‘ಅಭ್ಯರ್ಥಿಗಳ ಹೆಸರಲ್ಲಿ ಬೇರೊಬ್ಬರು ಬಂದು ಪರೀಕ್ಷೆ ಬರೆದಿದ್ದಾರೆ‘ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT