ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ನಬ್ ಮತ್ತು ಇತರ ಇಬ್ಬರು ವ್ಯಕ್ತಿಗಳಿಗೆ ನೀಡಿರುವ ಮಧ್ಯಂತರ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಿದೆ.

‘ಆಡಳಿತ ನಡೆಸುವವರಿಂದ ಕ್ರಿಮಿನಲ್ ಕಾನೂನುಗಳು ದುರ್ಬಳಕೆ ಆಗದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಜತೆಗೆ ಕ್ರಿಮಿನಲ್ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಿ ಬಳಕೆಯಾಗಿಲ್ಲ ಎಂಬುದನ್ನು ನ್ಯಾಯಾಂಗ ಖಚಿತಪಡಿಸಿಕೊಳ್ಳಬೇಕು’ ಎಂದು ಪೀಠ ಇದೇ ವೇಳೆ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ವೈಯಕ್ತಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದರೆ ಅದು ‘ನ್ಯಾಯದ ವಿಡಂಬನೆ’ ಆಗುತ್ತದೆ ಎಂದು ಹೇಳಿ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.