ರಾಜೀವ್‌ಗಾಂಧಿ ಹತ್ಯೆ ಪ್ರಕಣದ ಅಪರಾಧಿ ಪೆರೋಲ್ ಅವಧಿ ವಿಸ್ತರಿಸಿದ ಸುಪ್ರೀಂ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎ.ಜಿ. ಪೆರರಿವಲನ್‌ಗೆ ವೈದ್ಯಕೀಯ ತಪಾಸಣೆಗಾಗಿ ನೀಡಿದ್ದ ಪೆರೋಲ್ ಅನ್ನು ಸುಪ್ರೀಂಕೋರ್ಟ್ ಒಂದು ವಾರದ ಅವಧಿಗೆ ವಿಸ್ತರಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಹೇಮಂತ್ ಗುಪ್ತ, ಅಜಯ್ ರಸ್ತೋಗಿ ಅವರಿದ್ದ ಪೀಠವು ಸೋಮವಾರ ‘ವೈದ್ಯರ ಭೇಟಿ ಸಂದರ್ಭದಲ್ಲಿ ಪೆರರಿವಲನ್‌ಗೆ ಪೊಲೀಸ್ ಬೆಂಗಾವಲು ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿತು.
ಮದ್ರಾಸ್ ಹೈಕೋರ್ಟ್ ನೀಡಿದ್ದ ಪೆರೋಲ್ ಅವಧಿ ಸೋಮವಾರ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪೆರೋಲ್ ಅವಧಿಯನ್ನು ಒಂದು ವಾರ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.