ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಮನವಿ ಸಲ್ಲಿಕೆ ವಿಳಂಬ ಮಾಡುವವರಿಂದಲೇ ನಷ್ಟ ವಸೂಲಿ; ಸುಪ್ರೀಂ ಸೂಚನೆ

Last Updated 18 ಅಕ್ಟೋಬರ್ 2020, 9:23 IST
ಅಕ್ಷರ ಗಾತ್ರ

ನವದೆಹಲಿ: ಮೇಲ್ಮನವಿ ಸಲ್ಲಿಸಲು ಅತಿಯಾಗಿ ವಿಳಂಬ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಇದರಿಂದಾಗಿ ನ್ಯಾಯಾಲಯದ ಸಮಯ ವರ್ಥವಾಗಿದ್ದು, ಆ ನಷ್ಟವನ್ನು ಸಂಬಂಧಿಸಿದ ಅಧಿಕಾರಿಗಳಿಂದ ವಸೂಲಿ ಮಾಡಬೇಕು ಎಂದು ಸೂಚಿಸಿದೆ.

‘ಮೇಲ್ಮನವಿ ಸಲ್ಲಿಸಲು ಶಾಸನ ನಿಗದಿಪಡಿಸಿದ ಕಾಲ ಮಿತಿಯನ್ನು ಸರ್ಕಾರಿ ಅಧಿಕಾರಿಗಳು ನಿರ್ಲಕ್ಷಿಸಲು ನ್ಯಾಯಾಲಯ ಅವಕಾಶ ನೀಡುವುದಿಲ್ಲ‘ ಎಂದುನ್ಯಾಯಮೂರ್ತಿ ಎಸ್‌.ಕೆ.ಕೌಲ್ ಅವರನ್ನೊಳಗೊಂಡ ಪೀಠ ಹೇಳಿದೆ.

‘ಸರ್ಕಾರಿ ಆಡಳಿತ ಯಂತ್ರಗಳು ಸಕಾಲದಲ್ಲಿ ಮೇಲ್ಮನವಿಯನ್ನು ಸಲ್ಲಿಸುವಲ್ಲಿ ಅಸಮರ್ಥವಾಗಿದ್ದರೆ, ಮೇಲ್ಮನವಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡುವುದು ಅಥವಾ ಕಾಲಾವಕಾಶ ಕೇಳುವುದು ಪರಿಹಾರವಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಗಿದೆ‘ ಎಂದು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠ ಹೇಳಿದೆ.

ಮಧ್ಯಪ್ರದೇಶ ಸರ್ಕಾರ663 ದಿನಗಳ ನಂತರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸುವ ವೇಳೆ ನ್ಯಾಯಪೀಠ ‘ಕಾನೂನಿನ ಪ್ರಕಾರ ನಿಗದಿಪಡಿಸಿರುವ ಸಮಯದೊಳಗೆ ಮೇಲ್ಮನವಿಗಳನ್ನು ಸಲ್ಲಿಸಬೇಕು‘ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT