ನವದೆಹಲಿ (ಪಿಟಿಐ): ಮದುವೆ, ವಿಚ್ಛೇದನ, ಉತ್ತರಾಧಿಕಾರ ಹಾಗೂ ಜೀವನಾಂಶಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಹಾಗೂ ಲಿಂಗತ್ವ ತಟಸ್ಥ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಸುಪ್ರೀಂ ಕೋರ್ಟ್, ‘ಕಾನೂನು ರೂಪಿಸುವಂತೆ ಸಂಸತ್ತಿಗೆ ನಿರ್ದೇಶನ ನೀಡಲು ಬರುವುದಿಲ್ಲ’ ಎಂದು ಹೇಳಿದೆ.
‘ಇಂಥ ವಿಷಯಗಳು ಸಂಸತ್ತಿಗೆ ಸಂಬಂಧಿಸಿದವು. ಆದ್ದರಿಂದ ನಾವು ಈ ವಿಷಯಗಳ ಕುರಿತು ನಿರ್ದೇಶನ ನೀಡಲು ಸಾಧ್ಯವಿಲ್ಲ. ಇದು ನಮ್ಮ ಕಾರ್ಯವ್ಯಾಪ್ತಿಯಲ್ಲ’ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಜೆ.ಬಿ. ಪಾರ್ದೀವಾಲ ಅವರಿದ್ದ ಪೀಠವು ಅರ್ಜಿಗಳನ್ನು ವಜಾ ಮಾಡಿತು.
ಧಾರ್ಮಿಕ ಹಾಗೂ ಲಿಂಗತ್ವ ತಟಸ್ಥ ಕಾನೂನು ರೂಪಿಸುವಂತೆ ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಐದು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.