ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ವಂಚನೆ ಆರೋಪಿ ಸಂದೀಪ್ ಗುರುರಾಜ್‌ಗೆ ‘ಸುಪ್ರೀಂ’ ಜಾಮೀನು

Last Updated 18 ಜುಲೈ 2021, 14:43 IST
ಅಕ್ಷರ ಗಾತ್ರ

ನವದೆಹಲಿ: ಮಣಿಪಾಲ್ ಎಜುಕೇಷನ್ ಹಾಗೂ ಮೆಡಿಕಲ್ ಗ್ರೂಪ್‌ಗೆ ಹಣ ವಂಚಿಸಿದ್ದ ಆರೋಪಿ ಹಾಗೂ ಅದೇ ಗ್ರೂಪ್‌ನ ಮಾಜಿ ಉಪ ಪ್ರಧಾನ ವ್ಯವಸ್ಥಾಪಕ ಸಂದೀಪ್ ಗುರುರಾಜ್ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

ಸರ್ಕಾರಿ ಜಮೀನು ಖರೀದಿಗೆ ಸಂಬಂಧಿಸಿದಂತೆ ₹ 1.74 ಕೋಟಿ ಅವ್ಯವಹಾರದ ಮೂರನೇ ಪ್ರಕರಣದಲ್ಲಿ ಸಂದೀಪ್ ಅವರಿಗೆ ಜಾಮೀನು ನೀಡಲಾಗಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು, ‘ಈಗಾಗಲೇ ಚಾರ್ಜ್‌ಶೀಟ್ ದಾಖಲಾಗಿದೆ. ಕರ್ನಾಟಕ ಹೈಕೋರ್ಟ್‌ನ 2021ರ ಜ. 18ರ ಆದೇಶ ಪ್ರಕಾರ, ಆರೋಪಿಗೆ ಈಗಾಗಲೇ ₹ 75 ಕೋಟಿ ಮೊತ್ತದ ವಂಚನೆಗೆ ಸಂಬಂಧಿಸಿದಂತೆ ಜಾಮೀನು ನೀಡಲಾಗಿದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಹಾಗಾಗಿ, ಆರೋಪಿಯ ಜಾಮೀನನ್ನು ವಿಸ್ತರಿಸಬಹುದಾಗಿದೆ’ ಎಂದು ಅಭಿಪ್ರಾಯಪಟ್ಟಿತು.

ಮಣಿಪಾಲ್ ಎಜುಕೇಷನ್ ಹಾಗೂ ಮೆಡಿಕಲ್ ಗ್ರೂಪ್‌ಗೆ ₹ 75 ಕೋಟಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT