ಸೋಮವಾರ, ಅಕ್ಟೋಬರ್ 18, 2021
26 °C

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ, ನಿರ್ಮಾಪಕ ಸಚಿನ್‌ ಜೋಶಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜೈಲು ಸೇರಿದ್ದ ನಟ, ನಿರ್ಮಾಪಕ ಸಚಿನ್‌ ಜೋಶಿ ಅವರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ನಾಲ್ಕು ತಿಂಗಳ ಅವಧಿಗೆ ತಾತ್ಕಾಲಿಕ ಜಾಮೀನು ನೀಡಿದೆ.

ಮುಂಬೈ ಮೂಲದ ಓಂಕಾರ್‌ ರಿಯಾಲ್ಟರ್ಸ್‌ ಸಂಸ್ಥೆ ಜೊತೆ ₹ 100 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೋಶಿ ಅವರನ್ನು ಬಂಧಿಸಲಾಗಿತ್ತು. 

ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರ ರಾವ್‌ ಮತ್ತು ಸಂಜೀವ್‌ ಖನ್ನಾ ಅವರ ಪೀಠವು ವಿಚಾರಣೆ ನಡೆಸಿ, ಸಮಯ ವಿಸ್ತರಣೆಯನ್ನು ಕೋರಿ ಯಾವುದೇ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು. 

ತಾತ್ಕಾಲಿಕ ಜಾಮೀನು ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದೂ ಪೀಠ ಹೇಳಿದೆ. 

ಜೋಶಿ ಅವರ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರ ವಾದವನ್ನು ಪರಿಗಣಿಸಿದ ಪೀಠವು, ನಟನಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಜಾಮೀನು ಮಂಜೂರು ಮಾಡಿತು.  

‘ಅರ್ಜಿದಾರರ ಚಿಕಿತ್ಸೆಯ ಬಗ್ಗೆ ವಕೀಲ ಲೂತ್ರಾ ಅವರು ಸಲ್ಲಿಸಿದ ದಾಖಲೆಗಳನ್ನು ಪರಿಗಣಿಸಿ ನಾಲ್ಕು ತಿಂಗಳ ಅವಧಿಗೆ ತಾತ್ಕಾಲಿಕ ಜಾಮೀನು ನೀಡುತ್ತೇವೆ. ಆದರೆ ವಿಸ್ತರಣೆ ಕೋರಿ ಯಾವುದೇ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ’ ಎಂದು ಪೀಠ ಆದೇಶ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು