ನವದೆಹಲಿ: ಅಶ್ಲೀಲ ಚಿತ್ರಗಳ ವಿಡಿಯೊಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸಿರುವ ಆರೋಪ ಎದುರಿಸುತ್ತಿರುವ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಬಂಧನದಿಂದ ರಕ್ಷಣೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ 2021ರ ಜುಲೈ ತಿಂಗಳಿನಲ್ಲಿ ಕುಂದ್ರಾ ಅವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.

ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಕುಂದ್ರಾ ಅವರು ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠವು ಬುಧವಾರ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.

‘ಮುಂಬೈನ ಸೈಬರ್ ಸೆಲ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕು. ಈ ಮಧ್ಯೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು’ ಎಂದು ನ್ಯಾಯಪೀಠ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.