ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಗ್ಲ ಮಾಧ್ಯಮ ಶಿಕ್ಷಣ: ಆಂಧ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್

Last Updated 3 ಸೆಪ್ಟೆಂಬರ್ 2020, 8:26 IST
ಅಕ್ಷರ ಗಾತ್ರ

ನವದೆಹಲಿ: ಒಂದರಿಂದ ಆರನೇ ತರಗತಿವರೆಗಿನ ತೆಲುಗು ಮಾಧ್ಯಮ ಸರ್ಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಗುರುವಾರ ಆಂಧ್ರ ಪ್ರದೇಶದ ಸರ್ಕಾರಕ್ಕೆನೋಟಿಸ್ ನೀಡಿದೆ.

ಆಂಧ್ರ ಸರ್ಕಾರದ ಈ ಯೋಜನೆ ಕುರಿತು ಶ್ರೀನಿವಾಸ ಗುಂಟಪಲ್ಲಿ ಎಂಬುವರು ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಇಂದು ಮಲ್ಹೋತ್ರ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಪೀಠ ಆಂಧ್ರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಿಡಿಯೊ ಕಾನ್ಫೆರೆನ್ಸ್ ಮೂಲಕ ನಡೆದ ಈ ವಿಚಾರಣೆಯಲ್ಲಿ ಸರ್ಕಾರದ ಪರ ಹಿರಿಯ ವಕೀಲ ವಿಶ್ವನಾಥನ್ ಅವರು ಹಾಜರಾಗಿದ್ದು, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಜತೆಗೆ ಬಹುಪಾಲು ಪೋಷಕರು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಬೇಕೆಂದು ಬಯಸಿದ್ದಾರೆ. ಸಂವಿಧಾನದ ಪ್ರಕಾರ ಇದೊಂದು ಪ್ರಗತಿಪರ ಕ್ರಮ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಕುರಿತ ವಿಚಾರಣೆಯನ್ನು ನ್ಯಾಯಾಲಯ ಇದೇ 25ಕ್ಕೆ ನಿಗದಿಪಡಿಸಿದೆ.

ಇದೇ ವರ್ಷದ ಏಪ್ರಿಲ್‌ನಲ್ಲಿ ಆಂಧ್ರದ ಹೈಕೋರ್ಟ್, ‌ಸರ್ಕಾರದ ಈ ಯೋಜನೆ ಕುರಿತು ನಡೆದ ವಿಚಾರಣೆ ವೇಳೆ ಸರ್ಕಾರದ ಅರ್ಜಿಯನ್ನು ಬದಿಗಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT