ಬುಧವಾರ, ಅಕ್ಟೋಬರ್ 20, 2021
29 °C

ವೈದ್ಯಕೀಯ ಪಿ.ಜಿ ಕೋರ್ಸ್‌ಗೆ ಮೀಸಲಾತಿ; ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ‘ನೀಟ್‌’ ಮೂಲಕ ಪ್ರವೇಶ ಕಲ್ಪಿಸುವ ಸೀಟುಗಳಿಗೆ ಇತರೆ ಹಿಂದುಳಿದ ವರ್ಗಗಳಿಗೆ ಶೇ 27, ಇಡಬ್ಲ್ಯೂಎಸ್‌ಗೆ ಶೇ 10ರಷ್ಟು ಮೀಸಲಾತಿಯನ್ನು ನೀಡುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತು.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಬಿ.ವಿ.ನಾಗರತ್ನ ಅವರಿದ್ದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಕೇಂದ್ರ ಸರ್ಕಾರ, ವೈದ್ಯಕೀಯ ಕೌನ್ಸೆಲಿಂಗ್‌ ಸಮಿತಿ, ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸೂಚಿಸಿತು.

ಮಧುರಾ ಕವಿಶ್ವರ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಈಗಾಗಲೇ ನೀಲ್‌ ಔರೆಲಿಯೊ ನ್ಯೂನ್ಸ್‌ ಮತ್ತು ಇತರೆ 26 ಮಂದಿಯ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಲು ನಿರ್ಧರಿಸಿದೆ. ಅದರ ಜೊತೆಗೆ ಇದನ್ನು ಪರಿಗಣಿಸಲಾಗುವುದು ಎಂದು ತಿಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು