ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್‌ ಅಧಿಕಾರಿ ಜಾಮೀನು ಅರ್ಜಿ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌

Last Updated 17 ಆಗಸ್ಟ್ 2022, 21:42 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ಜೆ.ಮಂಜುನಾಥ್‌ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ನೋಟಿಸ್‌ ನೀಡಿದೆ.

ಜಮೀನು ಮಾಲೀಕತ್ವದ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಲಂಚ ಪಡೆದಿರುವ ಆರೋಪ ಎದುರಿಸುತ್ತಿರುವ ಜೆ. ಮಂಜುನಾಥ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜುಲೈ 4ರಂದು ಬಂಧಿಸಿದ್ದರು. ಅವರ ಜಾಮೀನು ಅರ್ಜಿಯನ್ನು ಸೆಷನ್ಸ್‌ ನ್ಯಾಯಾಲಯವು ಜುಲೈ 11ರಂದು ವಜಾ ಮಾಡಿತ್ತು. ಹೈಕೋರ್ಟ್‌ ಸಹ ಜಾಮೀನು ನೀಡಲು ನಿರಾಕರಿಸಿತ್ತು. ಆ ಬಳಿಕ ಮಂಜುನಾಥ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿರಿಯ ವಕೀಲ ಸಿದ್ದಾರ್ಥ ಲೂತ್ರಾ ಹಾಗೂ ವಕೀಲ ಸಂಜಯ್‌ ಎಂ.ನುಲಿ ವಾದ ಆಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠವು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಮಂಜುನಾಥ್ ಅವರು 40 ದಿನಗಳಿಂದ ಜೈಲಿನಲ್ಲಿದ್ದಾರೆ. ಅವರಿಗೆ ಜಾಮೀನು ನೀಡಬೇಕು ಎಂದು ಲೂತ್ರಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT