ಶನಿವಾರ, ಜನವರಿ 23, 2021
26 °C

ರಾಜಸ್ಥಾನ ಬಿಎಸ್‌ಪಿ ಶಾಸಕರ ಪಕ್ಷಾಂತರ: ಸ್ಪೀಕರ್‌, ಶಾಸಕರಿಗೆ ಸುಪ್ರೀಂ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜಸ್ಥಾನದಲ್ಲಿ ಬಿಎಸ್‌ಪಿಯ ಆರು ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ನ್ಯಾಯಮೂರ್ತಿ ಎಸ್‌.ಅಬ್ದುಲ್ ನಜೀರ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ಪೀಠವು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, ವಿಧಾನಸಭೆ ಕಾರ್ಯದರ್ಶಿ ಮತ್ತು ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ ಎಲ್ಲ ಆರು ಶಾಸಕರಿಗೂ ನೋಟಿಸ್ ನೀಡಿತು.

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಈ ಕುರಿತು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಬಿಎಸ್‌ಪಿ ಶಾಸಕರ ಅನರ್ಹತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಸ್ಪೀಕರ್ ಅವರಿಗೆ ಆದೇಶಿಸಿದ್ದ ರಾಜಸ್ಥಾನ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಆರು ಶಾಸಕರ ಪಕ್ಷಾಂತರದಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ವೃದ್ಧಿಯಾಗಿದ್ದು, ಅಶೋಕ್‌ ಗೆಹ್ಲೋಟ್ ನೇತೃತ್ವದ ಸರ್ಕಾರದ ಸ್ಥಾನವನ್ನು ಇನ್ನಷ್ಟು ಬಲಪಡಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು