ಭಾನುವಾರ, ನವೆಂಬರ್ 27, 2022
26 °C

ನವ್ಲಖಾ ಅರ್ಜಿ: ಎನ್‌ಐಎ, ಮಹಾರಾಷ್ಟ್ರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನ್ಯಾಯಾಂಗ ಬಂಧನಕ್ಕೆ ಬದಲಾಗಿ ಗೃಹಬಂಧನದಲ್ಲಿ ಇರಿಸುವಂತೆ ಎಲ್ಗಾರ್‌–ಪರಿಷತ್‌ ಮೊಕದ್ದಮೆಯಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವ್ಲಖಾ(70) ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ಕುರಿತು ಪ್ರತ್ರಿಕ್ರಿಯೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ಸದ್ಯ ಬಂಧನದಲ್ಲಿ ಇರಿಸಲಾಗಿರುವ ತಾಲೋಜ ಜೈಲಿನಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ ಮತ್ತು ಇತರ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಹಾಗಾಗಿ ತಮ್ಮನ್ನು ಗೃಹಬಂಧನದಲ್ಲಿ ಇರಿಸಬೇಕು ಎಂದು ಕೋರಿ ಗೌತಮ್‌ ಅವರು ಈ ಹಿಂದೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಜಾಗೊಳಿಸಿ ಏಪ್ರಿಲ್‌ 26ರಂದು ಹೈಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಗೌತಮ್‌ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಮತ್ತು ಋಷಿಕೇಶ್‌ ರಾಯ್‌ ಅವರಿದ್ದ ಪೀಠವು ಗೌತಮ್‌ ಅರ್ಜಿಯ ವಿಚಾರಣೆ ನಡೆಸಿದೆ. ಈ ಅರ್ಜಿ ಕುರಿತ ಮುಂದಿನ ವಿಚಾರಣೆಯನ್ನು ಸೆ. 29ಕ್ಕೆ ನಿಗದಿಪಡಿಸಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು