ಶುಕ್ರವಾರ, ಆಗಸ್ಟ್ 6, 2021
21 °C

ನಾರದಾ ಸ್ಟ್ರಿಂಗ್ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಮೂರ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ನಾರದಾ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ನಾಲ್ವರು ಟಿಎಂಸಿ ನಾಯಕರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ ದಿನದಂದು ನಡೆದ ಘಟನೆಯಲ್ಲಿ ತಮ್ಮ ಪಾತ್ರದ ಬಗ್ಗೆ ಪ್ರಮಾಣಪತ್ರ ಸಲ್ಲಿಸುವ ಕುರಿತು ‍‍ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮಲಾಯ್‌ ಘಾಟಕ್ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮಂಗಳವಾರ ಹಿಂದೆ ಸರಿದಿದ್ದಾರೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಬೋಸ್‌ ಅವರನ್ನೊಳಗೊಂಡ ರಜಾ ಪೀಠ ಮಂಗಳವಾರ ದಿನದ ಕಲಾಪ ಆರಂಭಿಸಿತು. ‘ನನ್ನ ಸಹೋದ್ಯೋಗಿ ನ್ಯಾಯಮೂರ್ತಿ ಬೋಸ್‌ ಅವರು ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ‘ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದರು.

ನ್ಯಾಯಮೂರ್ತಿ ಗುಪ್ತಾ ಅವರು ನ್ಯಾಯಪೀಠದ ನೇತೃತ್ವವಹಿಸಿದ್ದರು.  ಪಶ್ಚಿಮ ಬಂಗಾಳದ ಈ  ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಕೈಗೆತ್ತಿಕೊಳ್ಳಲಿದ್ದಾರೆ. ಇಂದೇ ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಮೇ 17 ರಂದು ನಾಲ್ವರು ಟಿಎಂಸಿ ಮುಖಂಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ ದಿನ ನಡೆದ ಘಟನೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರ ಪಾತ್ರದ ಕುರಿತು ಅಫಿಡವಿಟ್ ಸಲ್ಲಿಸುವ ಅವಕಾಶವನ್ನು ಹೈಕೋರ್ಟ್ ನಿರಾಕರಿಸಿತ್ತು.ಇದನ್ನು ಪ್ರಶ್ನಿಸಿ ಪಶ್ಮಿಮ ಬಂಗಾಳ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸೇರಿದಂತೆ ಮೂರು ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿತ್ತು

ಈ ಪ್ರಕರಣದಲ್ಲಿ ಸಿಬಿಐ ನಾಲ್ವರು ನಾಯಕರನ್ನು ಬಂಧಿಸಿದ ನಂತರ, ತನ್ನ ಕರ್ತವ್ಯ ನಿರ್ವಹಣೆಗೆ ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷದ ನಾಯಕರು ಅಡ್ಡಿಪಡಿಸಿದ್ದರು ಎಂದು ಆರೋಪಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು