ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ಪ್ರವೇಶ ಪರೀಕ್ಷೆಗೆ ಮಹಿಳೆಯರಿಗೆ ಅವಕಾಶ: ಮನವಿ ತಿರಸ್ಕರಿಸಿದ ‘ಸುಪ್ರೀಂ’

Last Updated 22 ಸೆಪ್ಟೆಂಬರ್ 2021, 11:30 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ವರ್ಷದಿಂದ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದು ಎಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ತಿರಸ್ಕರಿಸಿತು.

‘ಮಹಿಳೆಯರು ತಮ್ಮ ಹಕ್ಕುಗಳಿಂದ ವಂಚಿತರಾಗುವಂತೆ ಮಾಡಲು ತಾನು ಇಚ್ಛಿಸುವುದಿಲ್ಲ. ಅವರು ಈ ಪರೀಕ್ಷೆ ತೆಗೆದುಕೊಳ್ಳುವುದನ್ನು ಒಂದು ವರ್ಷ ಮುಂದೂಡಲು ಸಾಧ್ಯ ಇಲ್ಲ’ ಎಂದೂ ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್ ಹಾಗೂ ಬಿ.ಆರ್‌.ಗವಾಯಿ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ತುರ್ತು ಸನ್ನಿವೇಶಗಳನ್ನು ಎದುರಿಸಲು ಸಶಸ್ತ್ರ ಪಡೆಗಳ ಪಾತ್ವ ಮಹತ್ವದ್ದು. ಹೀಗಾಗಿ ಮಹಿಳೆಯರು ಸಹ ಎನ್‌ಡಿಎ ಸೇರ್ಪಡೆಗೆ ಅಗತ್ಯವಿರುವ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂಬ ಭರವಸೆ ಹೊಂದಿದ್ದೇವೆ’ ಎಂದು ನ್ಯಾಯಮೂರ್ತಿಗಳು ಹೇಳಿದರು.

ಅರ್ಜಿದಾರರಾದ ಕುಶ್ ಕಲ್ರಾ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ವಾದ ಮಂಡಿಸಿದರು.

ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಐಶ್ವರ್ಯ ಭಾಟಿ ಅವರು ‘ಎನ್‌ಡಿಎಗೆ ಮಹಿಳೆಯರ ಪ್ರವೇಶವನ್ನು ಸುಗಮಗೊಳಿಸಲು ಒಂದು ಅಧ್ಯಯನ ತಂಡ ರಚಿಸಲಾಗಿದೆ. ಈ ತಂಡದ ಮೂಲಕ ಮೇ 2022 ರ ವೇಳೆಗೆ ಅಗತ್ಯವಾದ ಕಾರ್ಯವಿಧಾನವನ್ನು ಜಾರಿಗೆ ತರಬಹುದು‘ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದೇ ವೇಳೆ ಎಎಸ್‌ಜಿ ಅವರು ನವೆಂಬರ್ 14ರಂದು ನಡೆಯಲಿರುವ ಎನ್‌ಡಿಎ ಪ್ರವೇಶ ಪರಿಕ್ಷೆಯನ್ನು ಕೈಬಿಡುವ ಕುರಿತು ನ್ಯಾಯಪೀಠವನ್ನು ಕೇಳಿದರು.

‘ನಿಮ್ಮ ಸಮಸ್ಯೆಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ನೀವು ಆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿದ್ದೀರಿ ಎಂದು ನಮಗೆ ಖಾತ್ರಿಯಿದೆ. ಆದರೆ, ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳ ದೃಷ್ಟಿಕೋನದಿಂದ ಗಮನಿಸಿದಾಗ, ಕೇಂದ್ರದ ಮನವಿಯನ್ನು ಸ್ವೀಕರಿಸುವುದು ಕಷ್ಟವಾಗುತ್ತದೆ‘ ಎಂದು ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT