ಗುರುವಾರ , ಏಪ್ರಿಲ್ 15, 2021
30 °C

ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ಭರ್ತಿ: ಆಂಧ್ರಪ್ರದೇಶಕ್ಕೆ ’ಸುಪ್ರೀಂ‘ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ನಡೆಸುವ ಪರೀಕ್ಷೆಗೆ ಹಾಜರಾಗಲು ಕಡ್ಡಾಯವಾಗಿ ಮೂರು ವರ್ಷಗಳ ಕಾಲ ವಕೀಲರಾಗಿ ಕಾರ್ಯ ನಿರ್ವಹಿಸಿರಬೇಕು ಎಂಬ ಷರತ್ತನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಅನಿರುದ್ಧ್‌ ಭೋಸ್‌ ಅವರ ಪೀಠವು ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದು, ಈ ಸಂಬಂಧ ಆಂಧ್ರಪ್ರದೇಶ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ (ನೇಮಕಾತಿ) ನೋಟಿಸ್‌ ಜಾರಿ ಮಾಡಿದೆ.

ಆರ್‌.ವೆಂಕಟೇಶ್‌ ಎಂಬವರು ಸುಪ್ರೀಂಕೋರ್ಟ್‌ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ. 

ಡಿಸೆಂಬರ್‌ 3 ರಂದು ಸಿವಿಲ್ ನ್ಯಾಯಾಧೀಶರ (ಕಿರಿಯ ವಿಭಾಗ) ಹುದ್ದೆಗಳ ಸಾಮಾನ್ಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು 2007ರ ಆಂಧ್ರಪ್ರದೇಶ ರಾಜ್ಯ ನ್ಯಾಯಾಂಗ (ಸೇವೆ ಮತ್ತು ಕೇಡರ್) ನಿಯಮಗಳು ಪ್ರಕಾರ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು