ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತಿನ ಸಮಸ್ಯೆ ಕಾರಣಕ್ಕೆ ಪದವಿ ಪ್ರವೇಶ ನಿರಾಕರಣೆ: ಸುಪ್ರೀಂಗೆ ವಿದ್ಯಾರ್ಥಿನಿ

Last Updated 3 ಅಕ್ಟೋಬರ್ 2022, 13:02 IST
ಅಕ್ಷರ ಗಾತ್ರ

ನವದೆಹಲಿ: ಮಾತಿನ ಸಮಸ್ಯೆ ಇರುವ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬರಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಲಯವು ಮೂರು ವಾರಗಳ ಗಡುವು ನೀಡಿದೆ.

ಭಾರತೀಯ ವೈದ್ಯಕೀಯ ಪರಿಷತ್ತಿನ ವೈದ್ಯಕೀಯಪದವಿ ಶಿಕ್ಷಣ ನಿಯಮ, 1997ರ ತಿದ್ದುಪಡಿ ಪ್ರಶ್ನಿಸಿ ವಿದ್ಯಾರ್ಥಿನಿಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಕೇಂದ್ರ ಸರ್ಕಾರ, ಭಾರತೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್‌ ನೀಡಿದೆ.

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ 2016ರಲ್ಲಿ ನಿಗದಿ ಮಾಡಿರುವಂಥ ನಿಯಮದಂತೆಯೇ ವಿದ್ಯಾರ್ಥಿನಿಗೆ ವೈದ್ಯಕೀಯ ಪದವಿ ಪ್ರವೇಶವನ್ನು ನಿರಾಕರಿಸಲಾಗಿದೆ. ವಿದ್ಯಾರ್ಥಿನಿಗೆ ಶೇ 40ರಷ್ಟು ಅಂಗವಿಲಕತೆ ಇದೆ. ಆದರೂ, ನೋಟಿಸ್‌ ಜಾರಿ ಮಾಡುವಂತೆ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT