ಮಂಗಳವಾರ, ಏಪ್ರಿಲ್ 20, 2021
23 °C

ಎನ್‌ಡಿಎ ಸೇರಲು ಮಹಿಳೆಯರಿಗೂ ಅನುಮತಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ‘

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅರ್ಹತೆ ಇದ್ದರೂ ಮಹಿಳಾ ಅಭ್ಯರ್ಥಿಗಳಿಗೆ ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಗೆ (ಎನ್‌ಡಿಎ) ಪ್ರವೇಶ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಬುಧವಾರ ನೋಟಿಸ್‌ ನೀಡಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ, ವಿ.ರಾಮಸುಬ್ರಮಣಿಯನ್‌ ಅವರಿರುವ ನ್ಯಾಯಪೀಠವು ಕೇಂದ್ರ ಸರ್ಕಾರ, ಕೇಂದ್ರ ಲೋಕಸೇವಾ ಆಯೋಗ ಹಾಗೂ ಇತರ ಸಂಸ್ಥೆಗಳಿಗೆ ನೋಟಿಸ್‌ ನೀಡಿದೆ.

‘ಎನ್‌ಡಿಎ ಹಾಗೂ ನಾವಲ್‌ ಅಕಾಡೆಮಿ ಪ್ರವೇಶ ಪರೀಕ್ಷೆಗೆ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಇದು ಲಿಂಗ ತಾರತಮ್ಯವಾಗಿದ್ದು, ಸಂವಿಧಾನದತ್ತ ಸಮಾನತೆ ಹಕ್ಕಿನ ಉಲ್ಲಂಘನೆಯಾಗುತ್ತದೆ. ಹೀಗಾಗಿ ಮಹಿಳೆಯರಿಗೂ ಈ ಪರೀಕ್ಷೆ ತೆಗೆದುಕೊಳ್ಳಲು ಅನುಮತಿ ನೀಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಕುಶ್‌ ಕಲ್ರಾ ಅರ್ಜಿ ಸಲ್ಲಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು