ಭಾನುವಾರ, ಜುಲೈ 3, 2022
27 °C

ಸಾರ್ವಜನಿಕ ರಜೆ ಘೋಷಣೆ: ಕೇಂದ್ರ, ರಾಜ್ಯಗಳಿಗೆ‌ ಸುಪ್ರೀಂ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗುರು ಗೋವಿಂದ ಸಿಂಗ್ ಅವರ ಜಯಂತಿ ನಿಮಿತ್ತ ಸಾರ್ವಜನಿಕ ರಜೆ ಘೋಷಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಸಿಖ್‌ ಸಮುದಾಯದ ಸಂಘಟನೆ ಆಲ್‌ ಇಂಡಿಯಾ ಶಿರೋಮಣಿ ಸಿಂಗ್ ಸಭಾ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕ ರಜೆ ಘೋಷಿಸುವ ಸಂಬಂಧ ದೇಶವ್ಯಾಪಿ ಏಕರೂಪ ನೀತಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿತ್ತು.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿತು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ಕೇಂದ್ರದ ನಿಲುವು ತಿಳಿಯುವುದಾಗಿ ತಿಳಿಸಿದರು. ಪೀಠ ಅರ್ಜಿಯ ವಿಚಾರಣೆಯನ್ನು ಇದೇ 29ಕ್ಕೆ ನಿಗದಿಪಡಿಸಿತು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು