ಶುಕ್ರವಾರ, ಅಕ್ಟೋಬರ್ 23, 2020
24 °C
ಫೇಸ್‌ಬುಕ್‌ ಇಂಡಿಯಾ ಉಪಾಧ್ಯಕ್ಷರಾದ ಅಜಿತ್‌ ಮೋಹನ್‌ಗೆ ಸಮನ್ಸ್‌ ಪ್ರಕರಣ

ದೆಹಲಿ ವಿಧಾನಸಭೆ ಕಾರ್ಯದರ್ಶಿಗೆ ‘ಸುಪ್ರೀಂ’ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಂಸ್ಥೆಯ ಉಪಾಧ್ಯಕ್ಷರಾದ ಅಜಿತ್‌ ಮೋಹನ್‌ ಅವರಿಗೆ ಸಮನ್ಸ್‌ ನೀಡಿರುವುದನ್ನು ಪ್ರಶ್ನಿಸಿ ಫೇಸ್‌ಬುಕ್‌ ಇಂಡಿಯಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ದೆಹಲಿ ವಿಧಾನಸಭೆ ಕಾರ್ಯದರ್ಶಿಯವರಿಗೆ ಬುಧವಾರ ನೋಟಿಸ್‌ ನೀಡಿದೆ. 

ಕಳೆದ ಫೆಬ್ರುವರಿಯಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಫೇಸ್‌ಬುಕ್‌ ಕೂಡಾ ಶಾಮೀಲಾಗಿತ್ತು ಎನ್ನುವ ಆರೋಪದಡಿ ವಿಚಾರಣೆಗೆ ಹಾಜರಾಗಲು ಅಜಿತ್‌ ಮೋಹನ್‌ಗೆ ವಿಧಾನಸಭೆ ಕಾರ್ಯದರ್ಶಿಯವರು ಸೆ.18ರಂದು ಸೂಚಿಸಿದ್ದರು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರಾದ ಹರೀಶ್‌ ಸಾಳ್ವೆ, ‘ಮಾತನಾಡುವಂತೆ ಅರ್ಜಿದಾರರ ಮೇಲೆ ಒತ್ತಡ ಹೇರಿದರೆ, ಸಂವಿಧಾನದ ವಿಧಿ 19 ಹಾಗೂ 21ರಡಿ ನೀಡಿರುವ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ವಾಕ್‌ಸ್ವಾಂತಂತ್ರ್ಯದಲ್ಲಿ ಮಾತನಾಡದೇ ಇರುವ ಹಕ್ಕನ್ನೂ ನೀಡಲಾಗಿದೆ’ ಎಂದರು. 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಪರವಾಗಿ ವಾದಿಸಿದ ಹಿರಿಯ ವಕೀಲ ಎ.ಎಂ.ಸಿಂಘ್ವಿ, ‘ಪ್ರಕರಣದಲ್ಲಿ ನ್ಯಾಯಾಲಯವು ತೀರ್ಪು ಪ್ರಕಟಿಸುವವರೆಗೂ ಯಾವುದೇ ನಿರ್ಬಂಧದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ’ ಎಂದು ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಅವರಿದ್ದ ಪೀಠಕ್ಕೆ ತಿಳಿಸಿದರು. ಜೊತೆಗೆ ‘ಫೇಸ್‌ಬುಕ್‌ ಅಧಿಕಾರಿಗೆ ಸಾಕ್ಷಿದಾರರಾಗಿ ನೋಟಿಸ್‌ ನೀಡಲಾಗಿದೆಯೇ ವಿನಃ ಆರೋಪಿಯಾಗಿ ಅಲ್ಲ’ ಎಂದು ಸಿಂಘ್ವಿ ಪೀಠಕ್ಕೆ ಸ್ಪಷ್ಟನೆ ನೀಡಿದರು.

ತಮ್ಮ ನಿಲುವಿನ ಕುರಿತು ಸ್ಪಷ್ಟನೆಯನ್ನು ಅಫಿಡಾವಿಟ್‌ ಮುಖಾಂತರ ಒಂದು ವಾರದೊಳಗೆ ಸಲ್ಲಿಸಲು ಸಿಂಘ್ವಿ ಅವರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಅ.15ಕ್ಕೆ ಮುಂದೂಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು