ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ ವಿಲೇವಾರಿ | ‘ಸುಪ್ರಿಂ’ಗೆ ಬಿಬಿಎಂಪಿ ಅರ್ಜಿ: ರಾಜ್ಯ ಸರ್ಕಾರಕ್ಕೆ ನೋಟಿಸ್

Last Updated 28 ನವೆಂಬರ್ 2021, 18:05 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ಮಹಾಲಕ್ಷ್ಮಿಪುರದಲ್ಲಿರುವ ಕಸ ವಿಲೇವಾರಿ ಮತ್ತು ಸಂಸ್ಕರಣಾ ಘಟಕ ಮುಚ್ಚುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಬಿಎಂಪಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ನ್ಯಾಯಮೂರ್ತಿಗಳಾದ ವಿನೀತ್‌ ಸರನ್ ಹಾಗೂ ಅನಿರುದ್ಧ ಬೋಸ್‌ ಅವರಿರುವ ನ್ಯಾಯಪೀಠ ಈ ಸೂಚನೆ ನೀಡಿದ್ದು, ಎರಡು ವಾರಗಳ ಒಳಗಾಗಿ ಉತ್ತರಿಸುವಂತೆ ನಿರ್ದೇಶನ ನೀಡಿದೆ.

ಘಟಕ ಇರುವ ಸ್ಥಳದಲ್ಲಿ ಬಯೋ ಮಿಥೇನೇಷನ್ ಘಟಕ ಸ್ಥಾಪಿಸಲು ಹಾಗೂ ಈ ಸ್ಥಳವನ್ನೇ ಘನ ತ್ಯಾಜ್ಯ ಸಾಗಣೆಗೆ ಬಳಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ತೆಗೆದುಕೊಳ್ಳದ ಕಾರಣ, ಘಟಕವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಬಿಬಿಎಂಪಿಗೆ ನಿರ್ದೇಶಿಸಿತ್ತು.

ಮೂರು ಶಾಲೆಗಳು ಹಾಗೂ ಒಂದು ಆಸ್ಪತ್ರೆ ಸಮೀಪದಲ್ಲಿಯೇ ಈ ಘಟಕ ಇದೆ. ಘಟಕವನ್ನು ಸ್ಥಳಾಂತರಿಸಿ, ಈ ಜಾಗವನ್ನು ಮೈದಾನವನ್ನಾಗಿ ಅಭಿವೃದ್ಧಿಪಡಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಕೋರಿ ಸ್ಥಳೀಯ ನಿವಾಸಿಗಳು ಸಹ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT