ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ಮುಂದೂಡಲು ಮನವಿ: ಯುಪಿಎಸ್‌ಸಿ ಪ್ರತಿಕ್ರಿಯೆ ಕೋರಿದ ಸುಪ್ರೀಂ

Last Updated 24 ಸೆಪ್ಟೆಂಬರ್ 2020, 11:11 IST
ಅಕ್ಷರ ಗಾತ್ರ

ನವದೆಹಲಿ:ಕೊರೊನಾ ಸೋಂಕು ವ್ಯಾಪಕವಾಗುತ್ತಿರುವುದರಿಂದ ನಾಗರಿಕ ಸೇವಾ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ,ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪ್ರತಿಕ್ರಿಯೆ ಕೋರಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್ ಮತ್ತು ಸಂಜೀವ್ ಖನ್ನಾ ಅವರಿದ್ದ ಪೀಠ,ಅರ್ಜಿ ವಿಚಾರಣೆಯನ್ನು ಸೆ.‌ 28ಕ್ಕೆ ಮುಂದೂಡಿತು.

20ಯುಪಿಎಸ್‌ಸಿಪರೀಕ್ಷೆ ಆಕಾಂಕ್ಷಿಗಳು ಈ ಅರ್ಜಿಯನ್ನು ಸಲ್ಲಿಸಿದ್ದು,ನಾಗರಿಕ ಸೇವಾ ಪರೀಕ್ಷೆಗಳನ್ನು ಎರಡು ಅಥವಾ ಮೂರು ತಿಂಗಳು ಮುಂದೂಡಬೇಕು. ಆ ಸಂದರ್ಭದಲ್ಲಿ ಮಳೆ, ಪ್ರವಾಹ ಪರಿಸ್ಥಿತಿಯೂ ತಗ್ಗುವುದರಿಂದ ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT