ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಖ್ಯ ಚುನಾವಣಾ ಆಯುಕ್ತರ ನೇಮಕ: ಸುಪ್ರೀಂ ಕೋರ್ಟ್‌ ತೀರ್ಪಿನ ಅಧ್ಯಯನ’

ಕೇಂದ್ರ ಸರ್ಕಾರ
Last Updated 23 ಮಾರ್ಚ್ 2023, 15:58 IST
ಅಕ್ಷರ ಗಾತ್ರ

ನವದೆಹಲಿ: ‘ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಂಬಂಧ ಮಾರ್ಚ್‌ 2ರಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಅಧ್ಯಯನ ನಡೆಸುತ್ತಿದೆ. ಇದಕ್ಕೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ‘ಸರಿಯಾದ ಕ್ರಮ’ವನ್ನು ತೆಗೆದುಕೊಳ್ಳಲಾಗುವುದು’ ಎಂದು ಕೇಂದ್ರವು ಗುರುವಾರ ರಾಜಸಭೆಗೆ ತಿಳಿಸಿದೆ.

‘ಸಂವಿಧಾನದ 342(2) ವಿಧಿಗೆ ಸಂಬಂಧಿಸಿ ಸಂಸತ್ತು ಕಾನೂನು ರೂ‍ಪಿಸುವವರೆಗೂ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರನ್ನು ಪ್ರಧಾನಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಸಮಿತಿಯು ನೇಮಕ ಮಾಡಲಿದೆ. ಆದರೆ, ಸದ್ಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲ. ಬದಲಿಗೆ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಪಕ್ಷದ ನಾಯಕ ಇದ್ದಾರೆ. ಆದ್ದರಿಂದ ಇವರೇ ಸಮಿತಿಯಲ್ಲಿ ಇರಲಿದ್ದಾರೆ’ ಎಂದು ಕಾನೂನು ಸಚಿವ ಕಿರಣ್‌ ರಿಜಿಜು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT