ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಕಲ್ಲು ಮನೇಶ್ವರಸ್ವಾಮಿ ದೇವಸ್ಥಾನ: ಯಥಾಸ್ಥಿತಿಗೆ ‘ಸುಪ್ರೀಂ’ ಆದೇಶ

Last Updated 12 ಆಗಸ್ಟ್ 2020, 14:00 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನ ಜಯನಗರದಲ್ಲಿರುವ ನಾಗರಕಲ್ಲು ಮುನೇಶ್ವರಸ್ವಾಮಿ ದೇವಸ್ಥಾನ ನೆಲಸಮ ಆದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಪಾದಚಾರಿಗಳಿಗೆ ಅಡ್ಡಿಯಾಗುತ್ತಿದೆ ಎನ್ನುವ ಕಾರಣಕ್ಕೆ 1854ರಲ್ಲಿ ನಿರ್ಮಾಣವಾಗಿದ್ದ ಈ ದೇವಸ್ಥಾನವನ್ನು ನೆಲಸಮಗೊಳಿಸಲು ಕರ್ನಾಟಕ ಹೈಕೋರ್ಟ್‌ ಜುಲೈ 14ರಂದು ಆದೇಶಿಸಿತ್ತು. ಲಲಿತ ಸಾಗಿರಾಜು ಅವರ ನೇತೃತ್ವದಲ್ಲಿ 51 ಭಕ್ತರು ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

ಭಕ್ತರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್‌ ರೋಹಟ್ಗಿ, ದೇವದತ್ ಕಾಮತ್‌, ‘ದೇವಸ್ಥಾನ ಅತ್ಯಂತ ಪಾರಂಪರಿಕವಾದದು ಎಂಬುದನ್ನು ಹೈಕೋರ್ಟ್ ಗಣನೆಗೆ ತೆಗೆದುಕೊಂಡಿಲ್ಲ, ಜೊತೆಗೆ ಈ ಆದೇಶದಿಂದ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಮೂರು ದಿನದೊಳಗಾಗಿ ಕಕ್ಷಿಯಾಗಿಸಲು ಸೂಚಿಸಿದ ಸುಪ್ರೀಂ ಕೋರ್ಟ್‌, ಅರ್ಜಿಗೆ ಸೆ.14ರಂದು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿಗೆ ನೋಟಿಸ್‌ ನೀಡಿತು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT