ಶುಕ್ರವಾರ, ಮೇ 20, 2022
26 °C

ತುಮಕೂರು ಮಷಿನ್ ಟೂಲ್ ಪಾರ್ಕ್‌ಗೆ ಭೂಸ್ವಾಧೀನ: ಯಥಾಸ್ಥಿತಿಗೆ ‘ಸುಪ್ರೀಂ’ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ತುಮಕೂರು ಮಷಿನ್‌ ಟೂಲ್‌ ಪಾರ್ಕ್‌’ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಎಐಡಿಬಿ) ಭೂಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂಕೋರ್ಟ್‌ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್ ಹಾಗೂ ಸಿ.ಟಿ.ರವಿಕುಮಾರ್‌ ಅವರಿದ್ದ ನ್ಯಾಯಪೀಠ ಈ ಸಂಬಂಧದ ಅರ್ಜಿ ವಿಚಾರಣೆ ನಡೆಸಿತು.

‘ಭೂ ಸ್ವಾಧೀನ, ಪುನರ್ವಸತಿಗೆ ಸಂಬಂಧಿಸಿ ನ್ಯಾಯಯುತ ಪರಿಹಾರ, ಪಾರದರ್ಶಕತೆ ಹಕ್ಕು ಕಾಯ್ದೆ–2013 ಅನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಕೆಐಎಡಿಬಿ ಕಾಯ್ದೆ 1966ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ಸಮ್ಮತಿಸಿತು. ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು