ನವದೆಹಲಿ (ಪಿಟಿಐ): ಉತ್ತರ ಪ್ರದೇಶ ಹಿಂದುಳಿದ ವರ್ಗಗಳ ಆಯೋಗದ ವರದಿ ಪ್ರಕಾರ ಒಬಿಸಿ ಕೋಟಾದೊಂದಿಗೆ ಎರಡು ದಿನಗಳಲ್ಲಿ ಅಧಿಸೂಚನೆ ಹೊರಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಅವಕಾಶ ನೀಡಿದ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಾರಿ ಸುಗಮವಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪಾರ್ದೀವಾಲ ಅವರ ಪೀಠವು, ‘ನ್ಯಾಯಾಲಯದ ನಿರ್ಧಾರಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರ 2022ರ ಡಿಸೆಂಬರ್‌ನಲ್ಲಿ ಹಿಂದುಳಿದ ವರ್ಗಗಳ ಆಯೋಗ ಸ್ಥಾಪಿಸಲು ಅಧಿಸೂಚನೆ ಹೊರಡಿಸಿತ್ತು’ ಎಂದು ಹೇಳಿದೆ.
2023ರ ಮಾರ್ಚ್ 9 ರಂದು ವರದಿಯನ್ನು ಕ್ಯಾಬಿನೆಟ್‌ಗೆ ಸಲ್ಲಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ಮಾಹಿತಿ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅರ್ಜಿಯನ್ನುಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದೆ.
ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಯಾವುದೇ ಮೀಸಲಾತಿ ಇಲ್ಲದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವಂತೆ ನಿರ್ದೇಶಿಸಿದ ಅಲಹಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಜನವರಿ 4 ರಂದು ತಡೆಯಾಜ್ಞೆ ನೀಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.