ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಕಳ್ಳಸಾಗಣೆ: 12 ಜನ ಅರೋಪಿಗಳ ಜಾಮೀನು ರದ್ದತಿಗೆ ‘ಸುಪ್ರೀಂ’ ನಕಾರ

ಕೇರಳ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಎನ್‌ಐಎಯಿಂದ ಅರ್ಜಿ
Last Updated 13 ಜುಲೈ 2021, 11:09 IST
ಅಕ್ಷರ ಗಾತ್ರ

ನವದೆಹಲಿ: ಚಿನ್ನ ಕಳ್ಳಸಾಗಣೆ ಪ್ರಕರಣದ 12 ಜನ ಆರೋಪಿಗಳಿಗೆ ಕೇರಳ ಹೈಕೋರ್ಟ್‌ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಎನ್‌ಐಎ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿತು.

ಆದರೆ, ಆರೋಪಿಗಳಿಗೆ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆಗಳಿಗೆ ಸಂಬಂಧಿಸಿ ಉದ್ಭವಿಸಿರುವ ಪ್ರಶ್ನೆಗಳ ಕುರಿತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್‌ ಸಮ್ಮತಿಸಿತು.

ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ ಹಾಗೂ ಹೃಷಿಕೇಶ್‌ ರಾಯ್‌ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

‘ಚಿನ್ನದ ಕಳ್ಳಸಾಗಣೆ ವಿರುದ್ಧ ಕ್ರಮ ಕೈಗೊಳ್ಳುವುದು ಕಸ್ಟಮ್ಸ್‌ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ. ಅದು ಯುಎಪಿಎ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ. ಇದನ್ನು ಎನ್‌ಐಎ ಪ್ರಶ್ನಿಸಿತ್ತು.

‘ಈ ಪ್ರಕರಣದ ಆರೋಪಿಗಳೆಲ್ಲರೂ ಸರ್ಕಾರಿ ನೌಕರರು. ಹೀಗಾಗಿ ಅವರಿಗೆ ನೀಡಿರುವ ಜಾಮೀನು ಅರ್ಜಿಯ ರದ್ದತಿಯ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಆರೋಪಿಗಳಿಗೆ ಜಾಮೀನು ನೀಡಿದ್ದರಿಂದ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿ ಉದ್ಭವಿಸಿರುವ ಪ್ರಶ್ನೆಗಳ ಕುರಿತು ಪರಿಶೀಲನೆಗೆ ಒಪ್ಪಿಗೆ ಇದೆ’ ಎಂದು ನ್ಯಾಯಪೀಠ ತಿಳಿಸಿತು.

ಕಳೆದ ವರ್ಷ ಜುಲೈ 5ರಂದು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ₹ 14.82 ಕೋಟಿ ಮೌಲ್ಯದ 30 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ಎನ್‌ಐಎ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT