ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲಿ ರಾಷ್ಟ್ರಗಳಲ್ಲಿ 'ನೀಟ್': ಕೇಂದ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ

Last Updated 24 ಆಗಸ್ಟ್ 2020, 12:13 IST
ಅಕ್ಷರ ಗಾತ್ರ

ನವದೆಹಲಿ: ಕೊಲ್ಲಿ ರಾಷ್ಟ್ರಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ–ನೀಟ್) ನಡೆಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಆದರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಂದೇ ಭಾರತ್ ಮಿಷನ್ ವಿಮಾನಗಳ ಮೂಲಕ ಬರಲು ಅವಕಾಶ ನೀಡುವಂತೆ ಸರ್ಕಾರವನ್ನು ಕೋರಿದೆ.

ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಅವರಿದ್ದ ಪೀಠವು, ಪರೀಕ್ಷೆಗಾಗಿ ಮಧ್ಯಪ್ರಾಚ್ಯ ದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ನಿಯಮಗಳು ಕಡ್ಡಾಯವಾಗಿದೆ. ಆದರೆ ಈ ಇದರಿಂದ ವಿನಾಯಿತಿ ಪಡೆಯಲು ಅರ್ಜಿದಾರರು ರಾಜ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಅವಕಾಶವಿದೆ ಎಂದು ತಿಳಿಸಿದೆ.

ಪರೀಕ್ಷೆಯು ಆಫ್‌ಲೈನ್ ಸ್ವರೂಪದಲ್ಲಿರುತ್ತದೆ. ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ 14 ದಿನಗಳ ಕಾಲ ಕ್ವಾರಂಟೈನ್‌ ಆಗಬೇಕಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.

ಸೆಪ್ಟೆಂಬರ್ 13 ರಂದು ನಿಗದಿಯಾಗಿರುವ ನೀಟ್ ಪರೀಕ್ಷೆಗೆ ಮಧ್ಯಪ್ರಾಚ್ಯದಲ್ಲಿರುವವರು ವಂದೇ ಭಾರತ್ ಮಿಷನ್ ವಿಮಾನಗಳಲ್ಲಿ ಭಾರತಕ್ಕೆ ಬರಲು ಅನುಮತಿ ಇದೆಯೇ ಎಂಬುದನ್ನು ಆಕಾಂಕ್ಷಿಗಳು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಸಚಿವಾಲಯಗಳೊಂದಿಗೆ ಮಾತನಾಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿದೆ.

ಇತ್ತೀಚೆಗಷ್ಟೇ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ, ಈ ವರ್ಷದ ನೀಟ್ ಯುಜಿ 2020 ಪರೀಕ್ಷೆಯನ್ನು ಮುಂದೂಡುವುದು ಶೈಕ್ಷಣಿಕ ವೇಳಾಪಟ್ಟಿಗೆ ಹೊಡೆತವನ್ನುಂಟುಮಾಡುತ್ತದೆ ಮತ್ತು ಇದು ವಿದ್ಯಾರ್ಥಿಗಳ ನಂತರದ ಶೈಕ್ಷಣಿಕ ವರ್ಷಗಳ ಮೇಲೆ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತದ ವಿದೇಶಿ ನಾಗರಿಕರು ಸೇರಿದಂತೆ ಭಾರತೀಯ ನಾಗರಿಕರಿಗೆ ವಿಶೇಷ ವಿಮಾನಗಳ ಮೂಲಕ ದೇಶಕ್ಕೆ ಬರಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡುವ ಮನವಿಗಳನ್ನು ವಜಾಗೊಳಿಸುವಂತೆ ಕೋರಿ ಅಫಿಡವಿಟ್ ಸಲ್ಲಿಸಲಾಗಿತ್ತು.

ಕೋವಿಡ್-19 ಸಾಂಕ್ರಾಮಿಕ ರೋಗವು ತಹಬದಿಗೆ ಬರುವವರೆಗೆ ಪರ್ಯಾಯವಾಗಿ ಪರೀಕ್ಷೆಯನ್ನು ಮುಂದೂಡಬೇಕೆಂದು ಸುಮಾರು 4,000 ನೀಟ್ (ಯುಜಿ) ಅಭ್ಯರ್ಥಿಗಳ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆಗೆ ಒಳಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT