ಶುಕ್ರವಾರ, ಫೆಬ್ರವರಿ 26, 2021
32 °C

ಮುಕ್ತ ಚುನಾವಣೆಗೆ ಮನವಿ: ವಿಚಾರಣೆಗೆ ಅರ್ಜಿ ಪರಿಗಣಿಸಲು ‌’ಸುಪ್ರೀಂ’ ಪೀಠ ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತು ಕೇಂದ್ರ ಸರ್ಕಾರ,  ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಅರ್ಜಿ ಪರಿಗಣಿಸಲು ನಿರಾಕರಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು, ಅರ್ಜಿದಾರರಾದ ಪುನೀತ್ ಕೌರ್ ಧಾಂಡಾ ಅವರು ಕಾನೂನಿನ ಪರಿಮಿತಿಯಲ್ಲಿ, ಇತರೆ ಪರಿಹಾರ ಕೈಗೊಳ್ಳಲು ಮುಕ್ತರಾಗಿದ್ದಾರೆ ಎಂದು ತಿಳಿಸಿತು.

ವಿಡಿಯೊ ಕಾನ್ಪರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಆರ್. ಸುಭಾಷ್ ರೆಡ್ಡಿ ಅವರೂ ಇದ್ದರು.

ವಕೀಲರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಅರ್ಜಿದಾರರು, ರಾಜ್ಯದಲ್ಲಿ ರಾಜಕೀಯ ಕಾರ್ಯಕರ್ತ ಕೊಲೆ ಪ್ರಕರಣ ಕುರಿತು ಸಿಬಿಐ ತನಿಖೆಗೆ ನಿರ್ದೇಶಿಸಬೇಕು ಎಂದು ಕೋರಲಾಗಿತ್ತು. ಬಿಜೆಪಿ ಅಧ್ಯಕ್ಷ ನಡ್ಡಾ ಸೇರಿದಂತೆ ಹಲವು ಮುಖಂಡರ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು