ನವದೆಹಲಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಮುಂದೂಡಬೇಕು ಇಲ್ಲವೇ ರದ್ದು ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಮಾಡುವುದಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ‘ಈ ಅರ್ಜಿಗಳ ವಿಚಾರಣೆ ನಡೆಸಲು ನಾವು ಇಚ್ಛಿಸುವುದಿಲ್ಲ. ಕೋವಿಡ್–19 ಪಿಡುಗಿನ ನಡುವೆಯೂ ನೀಟ್ ನಡೆಸಲು ಸಂಬಂಧಪಟ್ಟ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಲಿದೆ’ ಎಂದು ಹೇಳಿತು.

ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನೀಟ್ ಕಡ್ಡಾಯ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಸೆ. 13ರಂದು ಈ ಪರೀಕ್ಷೆಯನ್ನು ನಡೆಸಲಿದೆ.

ಜೆಇಇ ಮತ್ತು ನೀಟ್ ನಡೆಸುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಆಗಸ್ಟ್ 17ರಂದು ತೀರ್ಪು ನೀಡಿತ್ತು. ಇದರಿಂದ ಈ ಪರೀಕ್ಷೆಗಳನ್ನು ನಡೆಸಲು ಇದ್ದ ಅಡೆತಡೆಗಳು ನಿವಾರಣೆಯಾಗಿದ್ದವು.

ಆಗಸ್ಟ್ 17ರಂದು ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಹಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಜೆಪಿಯೇತರ ಪಕ್ಷಗಳು ಆಡಳಿತವಿರುವ ಆರು ರಾಜ್ಯಗಳ ಸಚಿವರು ಸಹ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಸೆಪ್ಟಂಬರ್ 4ರಂದು ಸುಪ್ರೀಂಕೋರ್ಟ್ ಈ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.