ಗುರುವಾರ , ಆಗಸ್ಟ್ 18, 2022
24 °C

ಫರೀದಾಬಾದ್‌: ಅರಣ್ಯ ಅತಿಕ್ರಮಣ ತೆರವಿಗೆ ತಡೆಯಾಜ್ಞೆ ನೀಡಲು ‘ಸುಪ್ರೀಂ’ ನಿರಾಕರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಸುಪ್ರೀಂಕೋರ್ಟ್‌

ನವದೆಹಲಿ: ಹರಿಯಾಣದ ಖೋರಿ ಗ್ರಾಮದ ಅರಾವಳಿ ಅರಣ್ಯ ಪ್ರದೇಶದಲ್ಲಿ ಸುಮಾರು 10,000 ವಸತಿ ನಿರ್ಮಾಣಗಳು ಸೇರಿದಂತೆ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್‌ ಮುನ್ಸಿಪಲ್ ಕಾರ್ಪೊರೇಷನ್‌ಗೆ ನಿರ್ದೇಶನ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ.

‘ಅರಣ್ಯ ಪ್ರದೇಶದಿಂದ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸಬೇಕು’ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಅರಣ್ಯ ಪ್ರದೇಶದಲ್ಲಿರುವ ವಸತಿ ನಿರ್ಮಾಣಗಳನ್ನು ತೆರವುಗೊಳಿಸಲು ನೀಡಲಾಗಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. 

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ ಖಾನ್‌ವಿಲ್ಕರ್‌ ಮತ್ತು ದಿನೇಶ್‌ ಮಹೇಶ್ವರಿ ಅವರ ಪೀಠವು ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಅಲ್ಲದೆ ತೆರವು ಕಾಮಗಾರಿಯನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಅರಾವಳಿ ಅರಣ್ಯ ಪ್ರದೇಶದಲ್ಲಿರುವ ಎಲ್ಲಾ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹರಿಯಾಣ ಮತ್ತು ಫರೀದಾಬಾದ್‌ ಮುನ್ಸಿಪಲ್ ಕಾರ್ಪೊರೇಷನ್‌ಗೆ ಸುಪ್ರೀಂಕೋರ್ಟ್‌ ಜೂನ್‌ 7ರಂದು ನಿರ್ದೇಶನ ನೀಡಿತ್ತು. ಅಲ್ಲದೆ ಈ ಸಂಬಂಧ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಿತ್ತು.

‘ಭೂಗಳ್ಳರು ಯಾವುದೇ ಕಾರಣಕ್ಕೂ ಕಾನೂನಿನ ಆಶ್ರಯ ಪಡೆಯಲು ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್‌ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು