ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ದೀಪ್‌ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ

Last Updated 16 ಫೆಬ್ರುವರಿ 2021, 17:01 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ಪತ್ರಕರ್ತ ರಾಜ್‌ದೀಪ್ ಸರ್‌ದೇಸಾಯಿ ಅವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ.

ಪರ್ತಕರ್ತ ರಾಜ್‌ದೀಪ್‌ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸುವಂತೆ ಆಸ್ತಾ ಖುರಾನಾ ಎಂಬುವವರು ವಕೀಲ ಪ್ರಕಾಶ್‌ ಪರಿಹಾರ್‌ ಎಂಬುವವರ ಮೂಲಕ ಸಂವಿಧಾನದ ವಿಧಿ 129ರ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗೆ ಸಲ್ಲಿಸಲಾಗಿದ್ದ ಆರ್ಜಿ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಕ್ಕೂ ಹಿಂದೆ, 2020ರ ಸೆ. 17ರಂದು ರಾಜ್‌ದೀಪ್‌ ವಿರುದ್ಧ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರು ಅಸಮ್ಮತಿ ಸೂಚಿಸಿದ್ದರು.

'ಆರೋಪಿಯು ನ್ಯಾಯಾಲಯ ಅಂಗೀಕರಿಸಿದ ಪ್ರತಿಯೊಂದು ನಿರ್ಧಾರ / ತೀರ್ಪಿನ ಮೇಲೆ ಉದ್ದೇಶಪೂರ್ವಕವಾಗಿ ಅವಿಧೇಯ ಹೇಳಿಕೆ ನೀಡಿದ್ದಾರೆ. ಇದು ಭಾರತದ ನಾಗರಿಕರ ಮನಸ್ಸಿನಲ್ಲಿ ಭಾರತದ ಉನ್ನತ ನ್ಯಾಯಾಲಯದ ಕುರಿತು ಅಗೌರ ಸೃಷ್ಟಿ ಮಾಡುತ್ತದೆ,' ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಯಾವ ಟ್ವೀಟ್‌ಗೆ ಸಂಬಂಧಿಸಿದಂತೆ ಪ್ರಕರಣ?

ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್‌ ಭೂಷಣ್‌ ಅವರು ತಪ್ಪಿತಸ್ಥರು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜ್‌ದೀಪ್‌ ಸರ್‌ದೇಸಾಯಿ ಮಾಡಿದ ಟ್ವೀಟ್‌ಗಳು ಅವರಿಗೆ ಸಮಸ್ಯಾತ್ಮಕವಾಗಿ ಪರಿಣಮಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT