ಸಿದ್ದರಾಮಯ್ಯ ವಿರುದ್ಧ ನಿಯಮ ಉಲ್ಲಂಘನೆ ಪ್ರಕರಣ: ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 23 ವರ್ಷಗಳ ಹಿಂದೆ ಮೈಸೂರಿನಲ್ಲಿ ಭೂಮಿ ಖರೀದಿಸಿದ ಸಂದರ್ಭ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಎನ್.ಗಂಗರಾಜು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್ ಕಳೆದ ಅಕ್ಟೋಬರ್ 30ರಂದು ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿತ್ತು.
ಹೈಕೋರ್ಟ್‌ನ ಆದೇಶ ಪ್ರಶ್ನಿಸಲಾದ ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣ್ಯ ಅವರಿದ್ದ ಪೀಠ ನಿರಾಕರಿಸಿತು.
1997ರಲ್ಲಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಮೈಸೂರಿನಲ್ಲಿ 10 ಗುಂಟೆ ಜಮೀನು ಖರೀದಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿಯಮ ಉಲ್ಲಂಘಿಸಿದ್ದಾರೆ ಎಂದು ದೂರಿ ಗಂಗರಾಜು ಅವರು 2018ರಲ್ಲಿ ದೂರು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಪೊಲೀಸರು ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿ ಪ್ರಕರಣವನ್ನು ಇತ್ಯರ್ಥಪಡಿಸಿದ್ದರು.
ಆದರೆ, ಪೊಲೀಸರು ಪ್ರಕರಣ ಇತ್ಯರ್ಥಪಡಿಸಿದ್ದರೂ, ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.