ಸೋಮವಾರ, ಜುಲೈ 4, 2022
21 °C

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಜಾಮೀನು ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ‌ಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಅವರ ಜಾಮೀನು ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ಡಿ.ವೈ. ಚಂಡ್ರಾಚೂಡ್‌ ಮತ್ತು ಸೂರ್ಯ ಕಾಂತ್‌ ಅವರಿದ್ದ ಪೀಠ, ಬಾಂಬೆ ಹೈಕೋರ್ಟ್‌ ಮಾರ್ಚ್‌ 15ರಂದು ನೀಡಿರುವ ತೀರ್ಪಿನ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಮಲಿಕ್‌ ಅವರು ವಿಚಾರಣಾ ನ್ಯಾಯಾಲಯದ ಎದುರು ಕಾನೂನಿನ ಅಡಿಯಲ್ಲಿ ಸೌಲಭ್ಯ ಪಡೆಯಬಹುದು ಎಂದು ಹೇಳಿದೆ.

ಮಲಿಕ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್, 1999ರಲ್ಲಿ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮಲಿಕ್‌ ಅವರನ್ನು ಬಂಧಿಸಲು ಅವರು ಯಾವುದೇ ಅಪರಾಧವೆಸಗಿಲ್ಲ ಎಂದು ಹೇಳಿದರು.

ವಾದ ಆಲಿಸಿದ ಪೀಠ, ವಿಚಾರಣೆ ಇನ್ನೂ ಆರಂಭಿಕ ಹಂತದಲ್ಲಿದೆ. ಹೀಗಾಗಿ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇವನ್ನೂ ಓದಿ
ಹಣ ಅಕ್ರಮ ವರ್ಗಾವಣೆ: ಮಲಿಕ್‌ ಬಂಧನ ​


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು