ಶುಕ್ರವಾರ, ಮೇ 20, 2022
24 °C

ಧೀರಜ್ ಪ್ರಸಾದ್ ಸಾಹು ರಾಜ್ಯಸಭಾ ಸದಸ್ಯತ್ವ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2018ರಲ್ಲಿ ಕಾಂಗ್ರೆಸ್‌ ಮುಖಂಡ ಧೀರಜ್ ಪ್ರಸಾದ್ ಸಾಹು ಅವರು ಜಾರ್ಖಂಡ್ ರಾಜ್ಯದಿಂದ  ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಅಭ್ಯರ್ಥಿ ಪ್ರದೀಪ್‌ ಕುಮಾರ್‌ ಸೋಂಥಾಲಿಯಾ ಅವರು, ಸಾಹು ಅವರ ಆಯ್ಕೆಯನ್ನು ಪ್ರಶ್ನಿಸಿ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಆ ಅರ್ಜಿಯನ್ನು ತಿರಸ್ಕರಿಸಿ, ಆದೇಶ ನೀಡಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಪ್ರದೀಪ್ ಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರ ಪೀಠ ವಜಾಗೊಳಿಸಿತು.

‘ಈ ಚುನಾವಣೆಯಲ್ಲಿ ವಿಚಾರಣಾಧೀನ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿದ್ದ ಅಂದಿನ ಶಾಸಕ ಅಮಿತ್‌ ಕುಮಾರ್ ಮಹತೊ ಅವರು ಹಾಕಿದ ಮತ ಮಾನ್ಯವಾಗಿದೆ‘ ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ.‌ಬೊಬಡೆ ತಿಳಿಸಿದ್ದಾರೆ. ನ್ಯಾಯಾಲಯ ಶಿಕ್ಷೆ ವಿಧಿಸುವ ಮುನ್ನ ಮಹತೊ ಅವರು ಮತದಾನ ಮಾಡಿದ್ದರು ಎಂದು ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು