ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ: ಯೋಗಿ ವಿರುದ್ಧದ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

Last Updated 26 ಆಗಸ್ಟ್ 2022, 13:53 IST
ಅಕ್ಷರ ಗಾತ್ರ

ನವದೆಹಲಿ: ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ 2007ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಅನುಮತಿ ನಿರಾಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಸಾಕ್ಷ್ಯವಿದ್ದ ಸಿ.ಡಿಯು ತಿರುಚಲ್ಪಟ್ಟದ್ದು ಎಂದು 2014ರ ಅಕ್ಟೋಬರ್‌ 13ರಂದು ಸಲ್ಲಿಕೆಯಾಗಿದ್ದ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಹೇಳಿದೆ ಎಂದೂ ನ್ಯಾಯಾಲಯ ತಿಳಿಸಿದೆ.

2017 ಮೇ 6ರಂದು ಅಂತಿಮ ವರದಿ ಸಲ್ಲಿಸುವ ಮೂಲಕ ತನಿಖೆಯನ್ನು ಕೊನೆಗೊಳಿಸಲಾಗಿದೆ. ಇದನ್ನು ವಿರೋಧಿಸಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯು ಈಗಾಗಲೇ ಬಾಕಿ ಉಳಿದಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಿ.ಟಿ. ರವಿಕುಮಾರ್‌ ಅವರಿದ್ದ ನ್ಯಾಯಪೀಠವು ಹೇಳಿದೆ.

ಅಲಹಾಬಾದ್‌ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪರ್ವೇಜ್ ಪರ್ವಾಜ್ ಹಾಗೂ ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT