ಶುಕ್ರವಾರ, ಡಿಸೆಂಬರ್ 2, 2022
19 °C
ಚುನಾವಣಾ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ ಎಂದು ಕಾರಣ ಹೇಳಿದ ನ್ಯಾಯಾಲಯ

ಚುನಾವಣೆ ಚಿಹ್ನೆ ಹಂಚಿಕೆ ವಿಚಾರ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಚುನಾವಣಾ ಚಿಹ್ನೆಗಳ ಹಂಚಿಕೆಗೆ ಸಂಬಂಧಿಸಿದಂತೆ ವಿವಾದವನ್ನು ಎತ್ತಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಇದು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದೆ.

‘ಚುನಾವಣಾ ಆಯೋಗಕ್ಕೆ ಚಿಹ್ನೆಯನ್ನು ನಿಗದಿಪಡಿಸುವ ಅಧಿಕಾರವಿಲ್ಲ’ ಎಂದು ಪ್ರತಿಪಾದಿಸಿದ್ದ ಅರ್ಜಿಯನ್ನು ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 

ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್ ಮತ್ತು ಎ.ಎಸ್. ಓಕಾ ಅವರನ್ನೊಳಗೊಂಡ ನ್ಯಾಯಪೀಠವು, ‘ಅರ್ಜಿದಾರರು ಚುನಾವಣಾ ಆಯೋಗದ ನಿಯಮಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ವಾಸ್ತವವಾಗಿ ಇದು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುತ್ತದೆ’ ಎಂದು ಹೇಳಿದೆ. 

‘ಇದು ನ್ಯಾಯಾಂಗದ ಸಮಯವನ್ನು ಸಂಪೂರ್ಣ ವ್ಯರ್ಥಗೊಳಿಸಿದೆ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ₹ 25 ಸಾವಿರ ವೆಚ್ಚ ಭರಿಸಲು ಸೂಚಿಸಿ, ಅರ್ಜಿಯನ್ನು ವಜಾಗೊಳಿಸುತ್ತೇವೆ’ ಎಂದೂ ನ್ಯಾಯಪೀಠ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು