ಮಂಗಳವಾರ, ಡಿಸೆಂಬರ್ 7, 2021
24 °C

ಬಡ್ತಿಯಲ್ಲಿ ಎಸ್ಸಿ, ಎಸ್ಟಿ ನೌಕರರಿಗೆ ಮೀಸಲಾತಿ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ನೌಕರರಿಗೆ ಮೀಸಲಾತಿ ನೀಡಬೇಕು ಎಂಬ ವಿಷಯಕ್ಕೆ ಸಂಬಂಧಿಸಿದ ತೀರ್ಪನ್ನು ಸುಪ್ರಿಂಕೋರ್ಟ್‌ ಮಂಗಳವಾರ ಕಾಯ್ದಿರಿಸಿತು.

ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್‌, ಸಂಜೀವ್‌ ಖನ್ನಾ ಹಾಗೂ ಬಿ.ಆರ್‌.ಗವಾಯಿ ಅವರಿರುವ ನ್ಯಾಯಪೀಠ ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿತು.

‘ಗ್ರೂಪ್‌ ‘ಎ’ ನಂತಹ ಉನ್ನತ ಹುದ್ದೆಗೇರುವುದು ಎಸ್‌ಸಿ ಹಾಗೂ ಎಸ್‌ಟಿ ನೌಕರರಿಗೆ ಬಹಳ ಕಷ್ಟ. ಇಂತಹ ಉನ್ನತ ಹುದ್ದೆಗಳಿಗೆ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ನೌಕರರನ್ನು ಭರ್ತಿ ಮಾಡುವುದಕ್ಕೆ ಅನುಕೂಲ ಕಲ್ಪಿಸುವಂತಹ ವಾಸ್ತವದಿಂದ ಕೂಡಿದ ಆಧಾರವನ್ನು ಸುಪ್ರೀಂಕೋರ್ಟ್‌ ಒದಗಿಸಬೇಕು’ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್‌ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಬಲ್ಬೀರ್‌ ಸಿಂಗ್‌ ಹಾಗೂ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲರು ಸಹ ವಾದ ಮಂಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು