ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ನಿಂದನೆ ಪ್ರಕರಣ: ವಿಜಯ ಮಲ್ಯ ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ

Last Updated 27 ಆಗಸ್ಟ್ 2020, 8:39 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಪುನರ್‌ಪರಿಶೀಲನಾ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಮ್ಮ ಮಕ್ಕಳಿಗೆ ₹ 295.415 ಕೋಟಿ(4ಕೋಟಿ ಡಾಲರ್‌) ವರ್ಗಾವಣೆ ಮಾಡಿದ ಪ್ರಕರಣದಲ್ಲಿ ವಿಜಯ ಮಲ್ಯ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು 2017ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪು ಪುನರ್‌ ಪರಿಶೀಲಿಸುವಂತೆ ಮಲ್ಯ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ ಮತ್ತು ಅಶೋಕ್‌ ಭೂಷಣ್‌ ಅವರನ್ನೊಳಗೊಂಡ ಪೀಠವು ತೀರ್ಪು ಕಾಯ್ದಿರಿಸಿದ್ದಾರೆ.

ನ್ಯಾಯಾಲಯದ ಹಲವು ಆದೇಶಗಳನ್ನು ಉಲ್ಲಂಘಿಸಿ ಬ್ರಿಟಿಷ್‌ ಕಂಪನಿ ಡಿಯಾಗೆಯೊನಿಂದ ಪಡೆದಿದ್ದ ₹295.415 ಕೋಟಿ ಮೊತ್ತವನ್ನು ವಿಜಯ ಮಲ್ಯ ತಮ್ಮ ಮಕ್ಕಳಿಗೆ ವರ್ಗಾಯಿಸಿದ್ದಾರೆ ಎಂದು ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಲ್ಯ ತಪ್ಪಿತಸ್ಥರು ಎಂದು 2017ರ ಮೇ 9ರಂದು ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT