ನವದೆಹಲಿ: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್) ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್, ಮಂಗಳವಾರ ತನ್ನ ತೀರ್ಪನ್ನು ಕಾಯ್ದಿರಿಸಿತು.

ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಐವರು ಸದಸ್ಯರನ್ನು ಒಳಗೊಂಡ ಸಾಂವಿಧಾನಿಕ ಪೀಠವು ಈ ವಿಷಯಕ್ಕೆ ಸಂಬಂಧಿಸಿ ಕಳೆದ ಆರು ದಿನಗಳ ಕಾಲ ವಾದ–ಪ್ರತಿವಾದಗಳನ್ನು ಆಲಿಸಿದೆ. ನ್ಯಾಯಮೂರ್ತಿಗಳಾದ ದಿನೇಶ ಮಾಹೇಶ್ವರಿ, ಎಸ್.ರವೀಂದ್ರ ಭಟ್, ಬೇಲಾ ಎಂ.ತ್ರಿವೇದಿ ಹಾಗೂ ಜೆ.ಬಿ.ಪಾರ್ದಿವಾಲಾ ಅವರು ಈ ಪೀಠದಲ್ಲಿದ್ದಾರೆ.

ಈ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ರವಿವರ್ಮ ಕುಮಾರ್, ಪಿ.ವಿಲ್ಸನ್, ಮೀನಾಕ್ಷಿ ಅರೋರಾ, ಸಂಜಯ್ ಪಾರೀಖ್ ಹಾಗೂ ಇತರರು ವಾದ ಮಂಡಿಸಿದ್ದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹಾಗೂ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.