ನವದೆಹಲಿ: ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಮತ್ತು ಪುತ್ರ ಮೊಹಮ್ಮದ್ ಅಬ್ದುಲ್ಲ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಮಂಗಳವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ ಕಾರಣ ವಿಚಾರಣಾ ನ್ಯಾಯಾಲಯವು ಎರಡು ವಾರಗಳೊಳಗೆ ದೂರುದಾರರ ಹೇಳಿಕೆ ಪಡೆದು, ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವಂತೆ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಮತ್ತು ಸಂಜೀವ್ ಖನ್ಹಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತನ್ನ ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಎರಡನೇ ಪ್ಯಾನ್ ಕಾರ್ಡ್ ಪಡೆಯಲು ನಕಲಿ ದಾಖಲೆ ಸೃಷ್ಟಿಸಲುಅಜಂ ಖಾನ್ ನೆರವಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.