ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಮುಂದೂಡಲು ಕೋವಿಡ್ ಕಾರಣ ಆಗಬಾರದು: ಸುಪ್ರೀಂ ಕೋರ್ಟ್

Last Updated 28 ಆಗಸ್ಟ್ 2020, 11:24 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಸ್ಥಿತಿ ಬಗೆಹರಿಯುವವರೆಗೂ ಬಿಹಾರ ವಿಧಾನಸಭೆಯ ಚುನಾವಣೆಯನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಚುನಾವಣೆಯನ್ನು ಮುಂದೂಡಲು ಕೋವಿಡ್ ಕಾರಣವಾಗಬಾರದು ಎಂದುಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು, ‘ಚುನಾವಣಾ ಆಯೋಗವು ಎಲ್ಲ ಅಂಶಗಳನ್ನು ಪರಿಗಣಿಸಲಿದೆ’ ಎಂದು ಅಭಿಪ್ರಾಯಪಟ್ಟಿತು. ನ್ಯಾಯಮೂರ್ತಿಗಳಾದ ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರು ಪೀಠದ ಇತರ ಸದಸ್ಯರು.

ಅರ್ಜಿದಾರರಾದ ಅವಿನಾಶ್ ಠಾಕೂರ್ ಅವರು, ಕೋವಿಡ್ ಕಾರಣದಿಂದಾಗಿ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT